ಮೈಸೂರು: ಜಿಲ್ಲೆಯಲ್ಲಿ ಮಾರ್ಚ್.1ರಿಂದ 10ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯುವ ವೇಳೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು(ಫೆಬ್ರವರಿ.21) ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ 50 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ. ಅವುಗಳಲ್ಲಿ ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಪರೀಕ್ಷೆ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳು ನೇಮಕ ಮಾಡಲಾಗಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಚೆಸ್ಕಾಂ ಅವರಿಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಇನ್ನೂ ಮೈಸೂರಿನಲ್ಲಿ 27 ಪರೀಕ್ಷಾ ಕೇಂದ್ರಗಳು, ನಂಜನಗೂಡಿನಲ್ಲಿ 5, ಹುಣಸೂರಿನಲ್ಲಿ 4, ಟಿ.ನರಸೀಪುರದಲ್ಲಿ 4, ಪಿರಿಯಾಪಟ್ಟಣದಲ್ಲಿ 4 ಹಾಗೂ ಎಚ್.ಡಿ.ಕೋಟೆಯಲ್ಲಿ 2 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದರು.