ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ (ಮಾರ್ಚ್ 22) ಅದ್ಧೂರಿಯಾಗಿ ಪಂಚ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ಬೇರೆ-ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಪಾತ್ರರಾದರು.
ಇಂದು ಬೆಳಿಗ್ಗೆ 6:30 ರಿಂದ 6:50ರ ಒಳಗಿನಭ ಮೀನ ಲಗ್ನದಲ್ಲಿ ಈ ಬಾರಿಯ ಪಂಚಮಹಾರಥೋತ್ಸವ ಅದ್ದೂರಿಯಾಗಿ ನೆರವೇರಿತು. ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು.
ನಂಜನಗೂಡಿನ ದೇವಸ್ಥಾನದ ಬೀದಿ ಮಾತ್ರವಲ್ಲ, ಪ್ರಮುಖ ರಸ್ತೆಗಳಲ್ಲಿ ಕೂಡಾ ರಥ ಸಾಗಿ ಬಂತು ದೇವಸ್ಥಾನ ಸೇರಿತು. ಈ ಸಮಯದಲ್ಲಿ ಲಕ್ಷಾಂತರ ಜನರು ರಥಗಳ ಮೇಲೆ ಹಣ್ಣು ಜವನವನ್ನು ಎಸೆದು ಭಕ್ತಿಭಾವ ಮೆರೆದರು.
ಶ್ರೀಕಂಠೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಬೃಹತ್ ರಥ ಸುಮಾರು 108 ಅಡಿ ಎತ್ತರವಿದ್ದು 110 ಟನ್ ತೂಕವಿದೆ. ಈ ಬೃಹತ್ ರಥವನ್ನು ಹರ್ಷೋದ್ಗಾರಗಳ ನಡುವೆ ಎಳೆಯುವ ಮೂಲಕ ಭಕ್ತರು ಪುನೀತರಾದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…