ಮೈಸೂರು

ಪಂಡಿತ್ ವೆಂಕಟೇಶ್ ಕುಮಾರ್‌ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ : ಸಿ.ಎಂ ಮೆಚ್ವುಗೆ

ಮೈಸೂರು : ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದ ಕುಟುಂಬದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತೀ ಅರ್ಹರು. ಇದು ನಮಗೇ ಸಲ್ಲುವ ಗೌರವ ಎಂದರು.

ಸಂಗೀತಕ್ಕೆ ಆಸಕ್ತಿ , ಶ್ರದ್ದೆ, ಏಕಾಗ್ರತೆ, ಶ್ರಮ ಅಗತ್ಯ. ಇಷ್ಟು ಇದ್ದರೆ ಸಂಗೀತ ಸಾಧನೆ ಸಾಧ್ಯ ಎಂದರು.

ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಅವರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎನ್ನುವ ಶಾಸಕ ಶ್ರೀವತ್ಸ ಅವರ ಬೇಡಿಕೆಯಂತೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago