ಮೈಸೂರು

ಪರಮೋತ್ಸವ | ಹೈಕಮಾಂಡ್‌ಗೆ ಎಚ್ಚರಿಕೆ ಸಂದೇಶ ರವಾನಿಸಿದ ಗೃಹ ಸಚಿವ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನಲೆ 2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆದಿತ್ತು. ಇದೀಗ ಅದೇ ರೀತಿ ಸಿದ್ದರಾಮಯ್ಯ ತವರೂರಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳಯ ಪರಮೋತ್ಸವ ಸಮಾವೇಶ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ದಲಿತರಿಗೆ ಹೆಜ್ಜೆ ಹೆಜ್ಜೆಗೂ ಅವಮಾನವಾಗುತ್ತಿದೆ. ಹೀಗಾಗಿ ನಮ್ಮ ಜನಗಳು ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದ್ದಾರೆ. ಈ ಮೂಲಕ ದಲಿತ ಮುಖ್ಯಮಂತ್ರಿ ವಿಚಾರವಾಗಿ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ನಗರದ ಕಲಾಮಂದಿರದಲ್ಲಿ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ರಾಜು ಬಿಳಿಕೆರೆ ಅವರ ನೇತೃತ್ವದಲ್ಲಿ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಪರಮೋತ್ಸವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೆಜ್ಜೆ ಹೆಜ್ಜೆಗೂ ದಲಿತರಿಗೆ ಅನ್ಯಾಯವಾಗುತ್ತಿದೆ. ಸಮಾನತೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿಕ್ಕೆ ಇನ್ನೆಷ್ಟು ವರ್ಷ ಕಾಯಬೇಕು. ಹೀಗಾಗಿ ನೀವುಗಳು ಹೋರಾಟಕ್ಕೆ ಸಜ್ಜಾಗಬೇಕು. ನಮಗೆ ನ್ಯಾಯ ದೊರೆಯಬೇಕಾದಲ್ಲಿ ಹೋರಾಟದ ಮೂಲಕವೇ ಆಗಬೇಕು. ನೀವುಗಳು ಹೋರಾಟಕ್ಕೆ ಮುಂದಾಗದಿದ್ದಲ್ಲಿ ಅದು ಅಂಬೇಡ್ಕರ್ ಅವರಿಗೆ ಮಾಡುವ ಅವಮಾನ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಸಂಬಂಧ ರಾಜು ಬಿಳಿಕೆರೆ ಅವರಿಗೆ ಸಾಕಷ್ಟು ತೊಂದರೆಗಳು ಎದುರಾಗಿತ್ತು. ಇಲ್ಲಿ ಹುಟ್ಟುಹಬ್ಬ ಆಚರಿಸಿದಲ್ಲಿ ಬೇರೆ ಸಂದೇಶ ಹೋಗಬಹುದು ಎಂಬುದು ಕೆಲವರ ಭಾವನೆಯಾಗಿತ್ತು. ಅದೆಲ್ಲವನ್ನೂ ಮೀರಿ ರಾಜು ಅವರು ಉತ್ತಮವಾಗಿ ಸಮಾರಂಭ ಆಯೋಜಿಸಿದ್ದಾರೆ. ಅವರಿಗೆ ಮತ್ತು ಅವರ ಸ್ನೇಹಿತರಿಗೆ ಅಭಿನಂದನೆಗಳು ಎಂದರು.

ನಾನು ರಾಜಕೀಯಕ್ಕೆ ಬಂದದ್ದು ದಿ.ರಾಜೀವ್‌ಗಾಂಧಿ ಅವರಿಂದ. ಸಮಾನತೆಯ ಬಗ್ಗೆ ಅವರು ಸಾಕಷ್ಟು ಕನಸು ಕಂಡಿದ್ದರು. ಭಾರತ ಬದಲಾದ ಭಾರತವಾಗಬೇಕು ಎಂಬುದು ಅವರ ಆಸೆಯಾಗಿತ್ತು. ಆದರೆ, ಅವರ ಆಸೆ ಇಂದಿಗೂ ಈಡೇರಿಲ್ಲ ಎಂದು ಹೇಳಿದರು.

ಸಮಾಜ ನಮ್ಮನ್ನು ಎಲ್ಲರಂತೆ ನೋಡುವವರೆಗೂ ಮೀಸಲಾತಿ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಆದರೆ, ಇಂದಿಗೂ ಮೀಸಲಾತಿಗೆ ಹೊಡೆದಾಡುತ್ತಿದ್ದೇವೆ. ಈಗ ಒಳ ಮೀಸಲಾತಿಗೂ ಹೋರಾಟ ನಡೆಯುತ್ತಿದೆ. ಇದು ಬದಲಾಗುವುದು ಯಾವಾಗ ಎಂದು ಪ್ರಶ್ನಿಸಿದರು.

ನಿನ್ನಲ್ಲಿ ಜಮೀನಿಲ್ಲ, ಆರ್ಥಿಕವಾಗಿ ನೀನು ಸಬಲನಲ್ಲ. ಆದರೂ ನೀನು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದಾದಲ್ಲಿ ಮೊದಲು ನೀನು ಶಿಕ್ಷಿತನಾಗು. ಶಿಕ್ಷಣ ಮಾತ್ರ ನಿನ್ನ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಅಂಬೇಡ್ಕರ್ ಅವರು ಹೇಳಿದ್ದರು. ಅದು ಇಂದಿಗೂ ಪ್ರಸ್ತುತ ಎಂದರು.

ಕಾರ್ಯಕ್ರಮದಲ್ಲಿ ಜ್ಞಾನಸ್ವರೂಪಾನಂದ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ವಿ.ಅಯ್ಯಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್, ತಿವಾರಿ, ಮಾಜಿ ಮಹಾಪೌರ ಪುರುಷೋತ್ತಮ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

39 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

1 hour ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

3 hours ago