File Photo of AAP Jalandhar MP Sushil Kumar Rinku : Aam Aadmi Party (AAP), Lok Sabha speaker Om Birla on Thursday suspended the party’s lone MP in the house, Sushil Kumar Rinku, for the rest of the monsoon session for his ‘unruly behaviour. He was suspended after he threw papers at the Chair during a discussion on the Delhi services bill.
ನವದೆಹಲಿ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ.
ಲೋಕಸಭೆಯು ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಅಂಗೀಕರಿಸುತ್ತಿದ್ದಂತೆ, ಇದನ್ನು ವಿರೋಧಿಸಿ ರಿಂಕು ಅವರು ಸದನದ ಬಾವಿಗಿಳಿದು ಕೆಲವು ಕಾಗದಗಳನ್ನು ಹರಿದು ಸ್ಪೀಕರ್ ಓಂ ಬಿರ್ಲಾ ಅವರತ್ತ ಎಸೆದರು.
ಮಸೂದೆಯನ್ನು ಅಂಗೀಕರಿಸಿದ ನಂತರ, ಬಿರ್ಲಾ ಅವರು ಸದನದಲ್ಲಿ ರಿಂಕು ಅವರ ನಡವಳಿಕೆಯನ್ನು ಆಕ್ಷೇಪಿಸಿದರು ಮತ್ತು ಎಎಪಿ ಸಂಸದನ ಅಮಾನತಿಗೆ ನಿರ್ಣಯ ಮಂಡಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸೂಚಿಸಿದರು.
ನಂತರ ಪಂಜಾಬ್‌ನ ಜಲಂಧರ್ ಲೋಕಸಭಾ ಕ್ಷೇತ್ರದ ಸಂಸದ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸುವ ನಿರ್ಣಯವನ್ನು ಪ್ರಲ್ಹಾದ್ ಜೋಶಿ ಅವರು ಮಂಡಿಸಿದರು.
ರಿಂಕು ಅವರು, ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ರಾಜ್ಯಸಭೆಯ ಎಎಪಿ ಸದಸ್ಯ ಸಂಜಯ್ ಸಿಂಗ್ ಅವರನ್ನು ಮೇಲ್ಮನೆಯಿಂದ ಅಮಾನತುಗೊಳಿಸಿದ ನಂತರ ಸಂಸತ್ ಅಧಿವೇಶನದ ಉಳಿದ ಭಾಗದಿಂದ ಅಮಾನತುಗೊಂಡ ಎರಡನೇ ಎಎಪಿ ಸದಸ್ಯರಾಗಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…