ಮೈಸೂರು

ಸಾಮವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟ ವಿಚಾರ : ಶ್ರೀನಿವಾಸ್‌ ಪ್ರಸಾದ್‌ !

ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ತಿಳಿಸಿದ್ದಾರೆ.

ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮನೆಗೆ ಭೇಟಿ ನೀಡಿ ನನ್ನ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇಂದು ನಡೆಯಲಿರುವ ಬಜೆಪಿ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದರು.

ಅವರ ಆಹ್ವಾನಕ್ಕೆ ಗೌರವ ನೀಡೋಣ, ಆದರೆ ಸಮಾವೇಶದಲ್ಲಿ ಭಾಗಿಯಾಗುವುದು ಬಿಡುವುದು ನಮಗೆ ಬಿಟ್ಟಿದ್ದು ಎಂದರು.

ಯಾರಿಗೆ ಮತ ಹಾಕಬೇಕು ಎಂಬುದು ಜನರು ಚಿಂತಿಸಲಿ : ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದೇನೆ. ನನ್ನ ಬೆಂಬಲಿಗರಿಗಾಗಲಿ, ಯಾವುದೇ ಪಕ್ಷದ ಮುಖಂಡರಿಗಾಲಿ ಅಥವ ಜನ ಸಾಮಾನ್ಯರಿಗಾಗಲಿ ಯಾರಿಗೆ ಮತ ಹಾಕ ಬೇಕು ಎಂದು ಸಲಹೆ ನೀಡುವುದಿಲ್ಲ.

ನಮ್ಮದು ಪ್ರಜಾಪ್ರಭುತ್ವ ದೇಶ ಮತದಾರರು ಬುದ್ದಿವಂತರಿದ್ದಾರೆ. ಯೋಚನೆ ಮಾಡುವ ಶಕ್ತಿ ಅವರಿಗಿದೆ. ಅವರು ಚಿಂತನೆ ಮಾಡಿ ಯಾರಿಗೆ ಬೇಕಾದರು ಮತ ನೀಡಲಿ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago