ಎಚ್.ಡಿ.ಕೋಟೆ: ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಕಳಸೂರು ಗ್ರಾಮದ ನಿವಾಸಿ ಅನಿಲ್ ಎಂಬುವವರಿಗೆ ಆರ್.ಧ್ರುವನಾರಾಯಣ್ ಅಭಿಮಾನಿ ಬಳಗದ ಸದಸ್ಯರು ಧನ ಸಹಾಯ ಹಾಗೂ ಆಹಾರ ಕಿಟ್ ವಿತರಣೆ ಮಾಡಿದರು.
ಕಳಸೂರು ಗ್ರಾಮದ ಅನಿಲ್ ಎಂಬುವವರು ಕಳೆದ ಕೆಲ ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಜೀವನಕ್ಕೆ ಆಸರೆಯಾದ ಮಗನಿಗೆ ಈ ರೀತಿ ಅನಾರೋಗ್ಯ ಕಾಡುತ್ತಿದೆ ಎಂದು ಪೋಷಕರು ತೀವ್ರ ದುಃಖದಲ್ಲಿದ್ದರು.
ವಿಷಯ ತಿಳಿದು ಅನಿಲ್ ಮನೆಗೆ ಭೇಟಿ ನೀಡಿದ ಆರ್.ಧ್ರುವನಾರಾಯಣ್ ಅಭಿಮಾನಿ ಬಳಗದ ಸದಸ್ಯರು, ಧನ ಸಹಾಯ ಹಾಗೂ ಆಹಾರ ಕಿಟ್ ವಿತರಣೆ ಮಾಡಿದರು.
ಈ ವೇಳೆ ಆರ್.ಧ್ರುವನಾರಾಯಣ್ ಬಳಗದ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಕಾರ್ಯದರ್ಶಿ ಮಂಜು ಮುಳ್ಳೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್, ನಾಗರಾಜ್ ಉಯ್ಯಂಬಳ್ಳಿ ಸೇರಿದಂತೆ ಹಲವರು ಹಾಜರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…