ಮೈಸೂರು

ದಸರಾ ಹಿನ್ನೆಲೆ ನಗರದೆಲ್ಲೆಡೆ ಟ್ರಾಫಿಕ್‌ ಜಾಂ

ದಸರಾ ರಜೆಗಾಗಿ ಊರಿಗೆ ಬಂದ ಜನ: ಟ್ರಾಫಿಕ್‌ ಜಾಂ

ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಬಂದ ಪರಿಣಾಮ ನಗರದ ಬಸ್‌ ನಿಲ್ದಾಣ, ಕೇಂದ್ರೀಯ ಬಸ್‌ ನಿಲ್ದಾಣ, ಹಾಗೂ  ರೈಲು ನಿಲ್ದಾಣವಿರುವ ಜೆ. ಎಲ್‌. ಬಿ. ರಸ್ತೆ ಹಾಗೂ ಮೈಸೂರು ನಂಜನಗೂಡು, ಮೈಸೂರು ಎಚ್‌ ಡಿ ಕೋಟೆ, ಮೈಸೂರು ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ರಾಜ್ಯದ ಇತರೆ ನಗರಗಳು ಹಾಗೂ ಹೊರ ರಾಜ್ಯದಿಂದ ಪ್ರವಾಸಿಗರು ಬಂದ ಪರಿಣಾಮ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಜನಸಂದಣಿಯ ವೇಳೆಯೇ ಮಳೆಯೂ ಆಗಿದ್ದರಿಂದ ವಿಪರೀತ ಸಂಚಾರ ದಟ್ಟಣೆ ಉಂಟಾಗಿ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹದಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಕೊಂಚವೇ ಏರಿಕೆಯಾಯಿತು. ರಾತ್ರಿ 7 ರ ವೇಳೆಗೆ ಮೈಸೂರು, ನಂಜನಗೂಡು, ಎಚ್‌ ಡಿ ಕೋಟೆ. ಹಾಗೂ ಹುಣಸೂರು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗಿದವು. ಇದೇ ವೇಳೆ ನಗರದ ಹಲವೆಡೆ ಅಲ್ಲಲ್ಲಿ ಜಿಟಿ ಜಿಟಿ ಮಳೆಯೂ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾದರು.

andolana

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 mins ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

4 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

4 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago