ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಸಂಕಷ್ಟ ಎದುರಾಗಲಿದೆ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. ಮಳೆ ಕೊರತೆಯಿಂದಾಗಿ ಜಲಾಶಯಗಳಿಗೆ ನೀರು ಹರಿದು ಬಂದಿಲ್ಲ. ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗುತ್ತದೆ.ಮಳೆ ಕೈಕೊಟ್ಟರೆ ಸರ್ಕಾರ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು. ಪರಿಸ್ಥಿತಿ ನಿಭಾಯಿಸಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಹೇಳಿದರು.

Tags: