ಮೈಸೂರು: ‘ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ’ ಎಂಬ ಮಾತಿನಂತೆ ದಸರಾ ಮುಗಿದರೂ ‘ಸಾಂಸ್ಕೃತಿಕ ನಗರಿ’ಗೆ ಬರುವ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದಸರಾ ಬಳಿಕವೂ ಮೈಸೂರಿನತ್ತ ಪ್ರವಾಸಿಗರ ದಂಡು ಹರಿದು ಬಂದಿದ್ದು, ಎಲ್ಲಾ ಕಡೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುತ್ತಿದ್ದರು ಇನ್ನು ಅಲ್ಲೇ ಇದ್ದ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡುವಂತಾಯಿತು.
ನಗರದ ಹಾರ್ಡಿಂಗ್ ವೃತ್ತ, ಕೆ.ಆರ್ ವೃತ್ತ, ಅಗ್ರಹಾರ, ಸಿ ಟಿ ಬಸ್ ಸ್ಟ್ಯಾಂಡ್ , ಸಯ್ಯಾಜಿ ರಾವ್ ರಸ್ತೆ, ಇರ್ವಿನ್ ರಸ್ತೆ, ಅಯುರ್ವೇದಿಕ್ ಆಸ್ಪತ್ರೆ ರಸ್ತೆಗಳಲ್ಲಿ ಜನಸಾಗರ ಕಂಡು ಬಂತು.
ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವ ಸರಳವಾಗಿ ನಡೆದಿತ್ತು. ಹಾಗಾಗಿ ವ್ಯಾಪಾರ, ವಹಿವಾಟು ಮತ್ತು ಪ್ರವಾಸೋದ್ಯಮ ನೆಲಕಚ್ಚಿತ್ತು. ಆದರೆ, ಈ ಬಾರಿ ಸರಕಾರ ಅದ್ಧೂರಿ ದಸರಾ ಆಚರಣೆ ಮಾಡಿದ ಪರಿಣಾಮ ಪ್ರವಾಸೋದ್ಯಮ ಚೇತರಿಕೆಗೆ ಅವಕಾಶ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಪ್ರವಾಸಿಗರು ಓಡಾಡಿಕೊಂಡಿದ್ದ ದೃಶ್ಯ ಕಣ್ಣಿಗೆ ಬಿತ್ತು
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…