ಮೈಸೂರು

ತಿ.ನರಸೀಪುರ: ಮಹಿಳೆಯ ಶವಸಂಸ್ಕಾರಕ್ಕೆ ಅವಕಾಶ ಕೊಡದ ಸ್ಥಳೀಯರು

ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ ತವರು ಕ್ಷೇತ್ರವಾದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ನಡೆದಿದೆ.

ಮೃತರು ದಾವಣಗೆರೆ ಮೂಲದ ಕೊರಚ ಕುಟುಂಬದ ರತ್ನಮ್ಮ ಎಂಬ ಕಾರಣಕ್ಕೆ ಸ್ಥಳಿಯರು ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಆದರೆ ಇವರು ಹಲವಾರು ವರ್ಷಗಳಿಂದ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ವಾಸವಾಗಿದ್ದು, ವಾಸಕ್ಕೆ ಸಂಬಂಧಿಸಿದಂತೆ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ಓಟರ್‌ ಐಡಿ, ವಾಸಸ್ಥಳ ದೃಢೀಕರಣ ಪತ್ರವಿದೆ.

ಮೃತ ದೇಹವನ್ನು ಕೊರಚ ಕುಟುಂಬವು ಹೂಳಲು ಹೊರಟಾಗ ಸ್ಥಳೀಯರು ಕಿರಿಕ್‌ ತೆಗೆದಿದ್ದಾರೆ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಪ್ರತ್ಯೇಕ ಸ್ಮಶಾನವಿದ್ದು, ಯಾವ ಸ್ಮಶಾನದಲ್ಲೂ ಅಂತ್ಯಸಂಸ್ಕಾರ ನೆರವೇರಿಸಲು ಮುಖಂಡರು ಅವಕಾಶ ಮಾಡಿಕೊಡದ ಕಾರಣ ಕುಟುಂಬಸ್ಥರು ಮೃತದೇಹವನ್ನು ದಾವಣಗೆರೆಗೆ ಕೊಂಡೊಯ್ದಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತ, ಅಧಿಕಾರಿಗಳು, ರಾಜಕಾರಣಿಗಳು ತೀವ್ರ ಮೌನವಹಿಸಿದ್ದು, ಇವರ ನಡೆಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶವವನ್ನು ದಾವಣಗೆರೆಗೆ ರವಾನೆ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago