ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ.
ಪಿರಿಯಾಪಟ್ಟಣದಲ್ಲಿ ಟೈಲ್ಸ್ ಮತ್ತು ಪೇಂಟಿಂಗ್ ಕೆಲಸ ಮಾಡುವ ನಾಲ್ವರು ಭಾನುವಾರ ಮಧ್ಯಾಹ್ನ ಈಜಲು ನದಿಗೆತೆರಳಿದ್ದು, ಈಜುತ್ತಿದ್ದ ವೇಳೆ ಪಿ. ಪಟ್ಟಣ ಟೌನ್ ನಿವಾಸಿ ಶಿವಮೂರ್ತಿ ಮಗ ಗಣೇಶ (೨೨) ಮತ್ತು ಕೆ. ಎಂ. ಬಡಾವಣೆಯ ನಿವಾಸಿ ಶತಾಜ್ ಎಂಬವರ ಮಗ ಇಮ್ರಾನ್ (೨೮) ಮೃತಪಟ್ಟಿದ್ದಾರೆ.
ನದಿಯಲ್ಲಿ ಈಜಲು ಹೋದ ಸಂದರ್ಭದಲ್ಲಿ ಇಮ್ರಾನ್ ಮುಳುಗಿದ್ದು, ಈತನನ್ನು ರಕ್ಷಿಸಲು ಹೋದ ಗಣೇಶ್ ಕೂಡ ಸಾವಿಗೀಡಾಗಿದ್ದಾನೆ. ಈ ಸಂಬಂಧ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಳುಗು ತಜ್ಞರಿಂದ ಗಣೇಶನ ಮೃತದೇಹ ಹೊರತೆಗೆಯಲಾಗಿದ್ದು, ಇಮ್ರಾನ್ ಶವ ಪತ್ತೆಯಾಗಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಸೋಮವಾರ ಕಾರ್ಯಾಚರಣೆ ಮುಂದುವರಿಸುವುದಾಗಿ ಪೊಲೀಸ್ ಇಲಾಖೆಯವರು ತಿಳಿಸಿದ್ದಾರೆ. ಗಣೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಿರಿಯಾಪಟ್ಟಣಕ್ಕೆ ತರಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…