ಮೈಸೂರು

ಪಿರಿಯಾಪಟ್ಟಣ| ತಂಬಾಕು ಬ್ಯಾರನ್ ಗೆ ಆಕಸ್ಮಿಕ ಬೆಂಕಿ

ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ.

ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರಾನ್‌ನಲ್ಲಿ ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತೆಗುಲಿದ್ದು ಇದರಿಂದ ಹದಮಾಡಲು ಬ್ಯಾರನ್‌ ಒಳಗೆ ಇದ್ದ ತಂಬಾಕು ಎಲೆಗಳು, ಬ್ಯಾರನ್‌ಗೆ ಅಳವಡಿಸಿದ್ದ ಪೈಪ್ ಸೆಟ್, ಬ್ಯಾರಾನ್ ಕಡ್ಡಿಗಳು, ಬ್ಯಾರಾನ್ ಮೇಲ್ಚಾವಣಿ ಮತ್ತು ಪೋಲ್ಸ್ ಸೇರಿ ಅಂದಾಜು ಎರಡು ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಬಿದ್ದ ವಿಷಯ ತಿಳಿದ ಪಿರಿಯಾಪಟ್ಟಣ ಅಗ್ನಿ ಶಾಮಕ ಠಾಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ತಂಬಾಕು ಮಂಡಳಿಯ ಕ್ಷೇತ್ರ ಅಧಿಕಾರಿ ಕನ್ನಿಕಾ ಸ್ಥಳಕ್ಕೆ ಆಗಮಿಸಿ ಬೆಂಕಿ ಸಂಭವಿಸಿರುವ ಬ್ಯಾರನನ್ನು ಪರಿಶೀಲನೆ ಮಾಡಿ ವಿಮಾ ಪರಿಹಾರ ನೀಡುವ ಭರವಸೆ ನೀಡಿದರು. ಈಗಾಗಲೇ ಕೆಲವು ತಂಬಾಕು ಬ್ಯಾರನ್ಗಳು ಬೆಂಕಿಗೆ ಆಹುತಿಯಾಗುತ್ತಿದ್ದು ತಂಬಾಕು ಹದಮಾಡುವ ವೇಳೆ ರೈತರು ವೈಜ್ಞಾನಿಕವಾಗಿ ಬ್ಯಾರಾನ್ ನ ಉಷ್ಣಾoಶ ಕಾಪಾಡಿಕೊಂಡು ಹೆಚ್ಚಿನ ಅನಾಹುತ ನೆಡೆಯದಂತೆ ಹೆಚ್ಚರಿಕೆ ವಹಿಸಬೇಕೆಂದು ರೈತರಲ್ಲಿ ವಿನಂತಿ ಮಾಡಿದರು.

ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಎಚ್.ಎಸ್ ಪ್ರಕಾಶ್ ಮಾತನಾಡಿ, ಅತಿಯಾದ ಮಳೆಯಿಂದಾಗಿ ತಂಬಾಕು ಎಲೆಗಳು ಹಣ್ಣಾಗುತ್ತಿದ್ದು ಉತ್ತಮ ದರ್ಜೆಯ ತಂಬಾಕು ಉತ್ಪತ್ತಿಯಾಗದೆ ರೈತರು ನಷ್ಠ ಅನುಭವಿಸುತ್ತಿದ್ದಾರೆ. ಇದರೊಂದಿಗೆ ಹದ ಮಾಡುವ ಬ್ಯಾರನ್‌ಗಳು ಬೆಂಕಿಗೆ ಆಹುತಿಯಾಗುತ್ತಿರುವುದು ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿ, ಹುಣಸೇಕುಪ್ಪೆ ಗ್ರಾಮಸ್ಥರು ಹಾಗೂ ರೈತರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

30 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago