ಮೈಸೂರು

ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು : ಪ್ರತಾಪ್‌ ಸಿಂಹ

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಲೇ ಇವರನ್ನು ಸದೆ ಬಡಿಯಬೇಕು. ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತಾ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್‌ ನಮ್ಮ‌ ಮೂಲ ನಿವಾಸಿ, ಅವನು ಪ್ರಕೃತಿ ರಕ್ಷಕ ಅಂತಾ ಕಥೆ ಕಟ್ಟಿ ಮಲೈ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಕಿಡಿಕಾರಿದರು.

ಅಕ್ಟೋಬರ್‌ 13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿ ಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ಹೇಳಿದರು.

ಬಿ ಟಿ ಲಲಿತಾ ನಾಯಕ್ ಸಚಿವೆಯಾಗಿದ್ದಾಗ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಡಾ ಬಿಆರ್‌ ಅಂಬೇಡ್ಕರ್‌ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದು ಕೊಂಡು ಬರುತ್ತಿರುವುದು ಸರಿನಾ? ಎಂದು ಪ್ರಶ್ನಿಸಿದರು.

ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು. ಸಂಘರ್ಷ ಆದರೂ ಪರವಾಗಿಲ್ಲ ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೆ ಚಾಮುಂಡಿ ಚಲೋ ಮಾಡ್ತಿರೋದು. ದೇಶ ಮತ್ತು ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ‌ ಪಕ್ಷವೂ ಅದೇ ರೀತಿ ಬೆಳೆದಿದ್ದು. ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ ಎಂದರು.

ಸಂಘರ್ಷದಿಂದಲೇ ನಾವು ಪಕ್ಷ ಕಟ್ಟಿರೊದು. ಚೈನಾ, ಪಾಕಿಸ್ತಾನ ಬಾರ್ಡರ್‌ನಲ್ಲಿ ಸಂಘರ್ಷವನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಧರ್ಮ ರಕ್ಷಣೆ‌ ವಿಚಾರವಾಗಿ ಸಂಘರ್ಷ ತಪ್ಪಲ್ಲ. ಚಾಮುಂಡಿ ಬೆಟ್ಟದಲ್ಲಿ ನಾವು ಯಾವುದೇ ಅನಾಚಾರ ನಡೆಯಲು ಬಿಡುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

lokesh

Recent Posts

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

4 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

22 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

47 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

2 hours ago