ಮೈಸೂರು

ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಆರೋಪ: ಬಂಕ್ ಮುಂದೆಯೇ ಭಾರೀ ಹೈಡ್ರಾಮಾ

ನಂಜನಗೂಡು: ನಂಜನಗೂಡಿನ ಗೋಳೂರು ಸರ್ಕಲ್ ಬಳಿಯಿರುವ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ನಾವು ಕೊಟ್ಟ ಹಣಕ್ಕೆ ಸರಿಯಾಗಿ ಪೆಟ್ರೋಲ್ ಹಾಕುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಗ್ರಾಹಕರು, ಈ ಬಂಕ್‌ನಿಂದ ನಮಗೆ ತೀವ್ರ ಮೋಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಂಕ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲೇ ರಿಯಾಲಿಟಿ ಚೆಕ್ ಮಾಡಿದ್ದಾರೆ. ಹಾಕಿದ ಪೆಟ್ರೋಲನ್ನೇ ಮರು ಪರಿಶೀಲನೆ ಮಾಡಿದ ಗ್ರಾಹಕರು, 1 ಲೀಟರ್‌ಗೆ ಭಾರೀ ಮೋಸವಾಗಿದೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂಕ್ ಮಾಲೀಕ ಬರುವಂತೆ ಆಗ್ರಹಿಸಿದ ಗ್ರಾಹಕರು, ಸ್ಥಳೀಯ ಪೊಲೀಸರ ಗಮನಕ್ಕೂ ತಂದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಟೌನ್‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೋಸ ಮಾಡುತ್ತಿರುವುದು ಸಾಬೀತಾದರೆ ಪೆಟ್ರೋಲ್‌ ಬಂಕ್‌ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

6 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

6 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

6 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

7 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

7 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

15 hours ago