ಮೈಸೂರು

ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ :ಕೆ ವಿ ರಾಜೇಂದ್ರ

ಮೈಸೂರು: ಪಾರಿವಾಳಗಳ ಹಿಕ್ಕೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ  ಅಧಿಕಾರಿಗಳಿಗೆ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಅರಮನೆ ನೋಡಲು ಬರುವ ಪ್ರವಾಸಿಗರಿಗೆ, ಪಾರಿವಾಳಗಳ ಹಿಂಡು ಸೆಲ್ಫೀಗೆ ಬಂದು ಖುಷಿಕೊಡುತ್ತಿವೆಯಾದರೂ ಇದು ಅರಮನೆ ಕಟ್ಟಡಕ್ಕೆ ಅಪಾಯಕಾರಿಯಾಗಿವೆ ಎಂಬ ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ‌ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಜೈನ್ ಸಂಸ್ಥೆಯ ವತಿಯಿಂದಲೂ ಸಹ ಪ್ರತಿನಿತ್ಯ ಪಾರಿವಾಳಗಳಿಗೆ 2 ಮೂಟೆ ಗೋಧಿ,ಜೋಳ, ಭತ್ತವನ್ನು ನೀಡುತ್ತಿದ್ದು, ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಆಹಾರ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುತ್ತಿದ್ದಾರೆ. ಇದರಿಂದ ಪಾರಿವಾಳಗಳು ಅರಮನೆಯ ಕಟ್ಟಡದ ಮೇಲೆಲ್ಲಾ ಹಿಕ್ಕೆಗಳನ್ನು ಹಾಕಿ ಅರಮನೆಗೆ ಹಾನಿಯುಂಟು ಮಾಡುತ್ತಿವೆ. ಇದು ಹೀಗೆ ಮುಂದುವರೆದರೆ ಮುಂಬರುವ ದಿನಗಳಲ್ಲಿ ಸಾಂಸ್ಕೃತಿಕ ಕಟ್ಟಡ ತನ್ನ ಸೌಂದರ್ಯವನ್ನು ಕಳೆದುಕೊಳ್ಳಲಿದೆ ಹಾಗಾಗಿ ಈಗಲೇ ಅದನ್ನು ತಡೆಗಟ್ಟಬೇಕು ಎಂದರು.

ಮೈಸೂರು ಅರಮನೆಯ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಿತ್ಯ ಮುಂಜಾನೆ ಮೂಟೆಗಳಲ್ಲಿ ಗೋದಿ ಕಾಳುಗಳನ್ನು ತಂದು ಸುರಿಯುತ್ತಾರೆ. ಇದನ್ನು ತಿನ್ನಲು ಸಾವಿರಾರು ಪಾರಿವಾಳಗಳು ಅಲ್ಲಿಯೇ ಬೀಡುಬಿಟ್ಟಿವೆ. ಕಾಳು ತಿನ್ನುವ ಸಂದರ್ಭ ಅವುಗಳ ಹಾರುವ ದೃಶ್ಯ ಮನೋಹರವಾಗಿರುತ್ತದೆ. ಇದನ್ನು ಶೂಟ್‌ ಮಾಡಲು ಖ್ಯಾತ ಛಾಯಾ ಗ್ರಾಹಕರೂ ಆಗಮಿಸುತ್ತಾರೆ.

ಪಾರಿವಾಗಳಿಗೆ ಕಾಳು ಹಾಕುವುದನ್ನು ಪಾರಂಪರಿಕ ತಜ್ಞರು ಹಾಗೂ ಪರಿಸರ ಪ್ರೇಮಿಗಳು ಅಪಾಯಕಾರಿ ಎಂದು ಪರಿಗಣಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಖುಷಿಗಾಗಿ ಪಕ್ಷಿಗಳಿಗೆ ತೊಂದರೆ ನೀಡದಂತೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.

ಅರಮನೆಯ ಅಧಿಕಾರಿಗಳು ಜೈನ್ ಸಂಸ್ಥೆಯೊಂದಿಗೆ ಮಾತನಾಡಿ ಅವಶ್ಯಕತೆ ತಕ್ಕಷ್ಟು ಆಹಾರವನ್ನು ನೀಡುವಂತೆ ಅವರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಹಾಗೂ ಪ್ರವಾಸಿಗರು ನೀಡುವ ಆಹಾರ ಧಾನ್ಯಗಳಿಗೆ ಅನುಗುಣವಾಗಿ ಅವಶ್ಯವಿದ್ದರೆ ಜೈನ್ ಸಂಸ್ಥೆ ಅವರು ಪಾರಿವಾಳಗಳಿಗೆ ಪಕ್ಷಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸುವಂತೆ ಸಂಸ್ಥೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಧಾನ್ಯಗಳನ್ನು ಹಾಕುತ್ತಿರುವುದರಿಂದ ಅರಮನೆಯ ಸ್ವಚ್ಛತೆಗೆ ಧಕ್ಕೆ ಉಂಟಾಗುತ್ತಿದ್ದು, ಅದರ ಬಗ್ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಒಬ್ಬ ಸಹಾಯಕನನ್ನು ನೇಮಿಸಬೇಕು ಎಂದು ಸಲಹೆ ನೀಡಿದರು.

ಒಂದೇ ಕಡೆ ಹೆಚ್ಚು ಆಹಾರ ಧಾನ್ಯ ಹಾಕುವ ಬದಲು ಹಂತ ಹಂತವಾಗಿ ಪಾರಂಪರಿಕ ಕಟ್ಟಡಗಳಿಂದ ದೂರದಲ್ಲಿ ಪಕ್ಷಿಗಳಿಗೆ ಆಹಾರ ಧಾನ್ಯ ಹಾಕುವುದನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಸಲಹೆಯನ್ನು ಒಪ್ಪಿದ ಜೈನ್ ಸಂಸ್ಧೆಯವರು ಈ ರೀತಿ ಕ್ರಮವಹಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು

ಈ ಕಾರ್ಯದಲ್ಲಿ ಪಕ್ಷಿಗಳು ಹಾಗೂ ಪಾರಂಪರಿಕ ಕಟ್ಟಡಗಳಿಗೆ ತೊಂದರೆಯಾಗದಂತೆ ನೋಡಿಕೊಂಡು ಎರಡನ್ನು ಉಳಿಯುವಂತೆ ನೋಡಿಕೊಳ್ಳಬೇಕು. ಅರಮನೆಯ ಆಡಳಿತ ಅಧಿಕಾರಿಗಳು ಸ್ವಚ್ಛತೆಯನ್ನು ಕಾಪಾಡುವಲ್ಲಿ ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಶರೀಫ್, ಅರಮನೆ ಉಪ ನಿರ್ದೇಶಕರಾದ ಸುಬ್ರಹ್ಮಣ್ಯ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago