ಮೈಸೂರು

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು ಮುಂದಾಗಿದ್ದಾರೆ ಎಂದು ಚಿಕ್ಕಕೆರೆಯೂರು ಹಾಡಿಯ ಗಿರಿಜನರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಲ್ಲೂಕಿನ ಸವ್ವೆ ಗ್ರಾಮದ ಸಮೀಪ ಸರ್ಕಾರ ನೀಡಿದ ಜಮೀನಿನಲ್ಲಿ ಆದಿವಾಸಿ ರೈತರು ಧರಣಿ ನಡೆಸುತ್ತಿದ್ದು, ನಮಗೆ ನ್ಯಾಯ ಸಿಗುವವರೆಗೂ, ಪ್ರತಿಭಟನೆ ನಡೆಸುತ್ತೇವೆ. ಸರ್ಕಾರ ೨೦೦೧ರಲ್ಲಿ ೮ ಎಕರೆ ಜಮೀನನ್ನು ನಮಗೆ ನೀಡಿದ್ದಕ್ಕೆ ಸಂಬಂಧಪಟ್ಟ ದಾಖಲೆಗಳಿವೆ. ಹೀಗಾಗಿ ಯಾವುದೇ ಕಾರಣಕ್ಕೂ ನಮ್ಮ ಜಮೀನುಗಳನ್ನು ಬೇರೆಯವರ ಪಾಲಾಗಲು ಬಿಡುವುದಿಲ್ಲ. ನಮ್ಮ ಮೇಲೆ ಎಷ್ಟೇ ದಬ್ಬಾಳಿಕೆ ಮಾಡಿದರೂ ಇಲ್ಲಿಯೇ ಇರುತ್ತೇವೆ. ನ್ಯಾಯ ಸಿಗುವವರೆಗೂ ಇಲ್ಲಿಯೇ ಧರಣಿ ನಡೆಸುತ್ತೇವೆ ಎಂದು ತಿಳಿಸಿದರು.

ಆದಿವಾಸಿ ಮುಖಂಡ ಪುಟ್ಟಬಸವ ಮಾತನಾಡಿ, ಕಸಬಾ ಹೋಬಳಿ ಸವ್ವೆ ಗ್ರಾಮದ ಸರ್ವೆ ನಂ.೫೯ರಲ್ಲಿ ಆರು ಆದಿವಾಸಿ ಕುಟುಂಬಗಳಿಗೆ ಸರ್ಕಾರ ಜಮೀನು ಮಂಜೂರು ಮಾಡಿದೆ. ಈ ಸಂಬಂಧ ಆದಿವಾಸಿಗಳ ಬಳಿ ಆರ್‌ಟಿಸಿ ಸೇರಿದಂತೆ ಸಂಬಂಧಪಟ್ಟ ದಾಖಲೆಗಳೂ ಇವೆ. ಕಳೆದ ಹಲವು ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಅನುಭವದಲ್ಲಿದ್ದಾರೆ. ಆದರೆ, ಪ್ರಭಾವಿ ವ್ಯಕ್ತಿ ಕೃಷ್ಣಶೆಟ್ಟಿ ಮತ್ತು ರಂಗಶೆಟ್ಟಿ ಎಂಬವರು ಆದಿವಾಸಿಗಳ ಮುಗ್ಧತೆ ದುರುಪಯೋಗಪಡಿಸಿಕೊಂಡು, ಅವರ ಜಮೀನು ಕಬಳಿಸಲು ಮುಂದಾಗಿದ್ದಾರೆ. ಕೈಬರವಣಿಗೆಯ ಆರ್‌ಟಿಸಿ ಹಾಗೂ ನಕಲಿ ದಾಖಲೆ ಸೃಷ್ಟಿಸಿಕೊಂಡು ಆದಿವಾಸಿಗಳ ಜಮೀನು ತನ್ನದು ಎಂದು ಸರ್ವೇ ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡಿ, ಜಮೀನು ಅಳತೆ ಮಾಡಿಸಲು ಮುಂದಾಗಿದ್ದಾರೆ. ಶುಕ್ರವಾರ ಸರ್ವೆ ಮಾಡಲು ಅಧಿಕಾರಿಗಳು ಬಂದಿದ್ದರು. ನಮ್ಮ ಬಳಿ ಇರುವ ದಾಖಲೆಗಳನ್ನು ತೋರಿಸಿದ ಬಳಿಕ ವಾಪಸ್ ಹೋಗಿದ್ದಾರೆ. ಸೆ.೮ರ ಮಂಗಳವಾರ ಇಬ್ಬರಿಗೂ ಜಮೀನಿಗೆ ಸಂಬಂಧಪಟ್ಟ ಪೂರಕ ದಾಖಲೆಗಳನ್ನು ತರುವಂತೆ ಅಧಿಕಾರಿಗಳು ಹೇಳಿದ್ದಾರೆ. ಅಲ್ಲಿಯವರೆಗೆ ನಾವು ಇಲ್ಲಿಯೇ ಧರಣಿ ನಡೆಸುತ್ತೇವೆ. ಮೋಸವಾಗಲು ಬಿಡುವುದಿಲ್ಲ ಎಂದರು.

 

ಆಂದೋಲನ ಡೆಸ್ಕ್

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

1 hour ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago