ಮೈಸೂರು

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ ಇತ್ತು. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸಂಭಾಷಣೆಯ ಗುಟ್ಟು ಬಿಚ್ಚಿಟ್ಟಿದ್ದಾರೆ.

ಈ ಮೂಲಕ ಎಲ್ಲಾ ಕೂತುಹಲಕ್ಕೆ ತೆರೆ ಎಳೆದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ, ʻಅವರು ನನಗೆ ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ʼ ಎಂದು ಕೇಳಿದರು. ನಾನು ಮಹಿಳಾ ಮೀಸಲಾತಿ ಪರ ಇದ್ದೇವೆ ʼ ಎಂದು ಹೇಳಿದೆ ಎಂದಿದ್ದಾರೆ.

ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ. ಈ ವಿಷಯದಲ್ಲಿ ಪ್ರಧಾನಿ ಮೋದಿ ಡಬಲ್‌ ಸ್ಟ್ಯಾಂಡ್‌ ಹೊಂದಿದ್ದಾರೆ. ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. ಅವರು ಮನಸ್ಸು ಮಾಡಿದ್ದರೆ 2023ರಲ್ಲಿಯೇ ಮಹಿಳಾ ಮೀಸಲಾತಿ ಜಾರಿಗೆ ತರಬಹುದಿತ್ತು. ಈಗ ಜಾರಿ ಮಾಡಲು ಅವಕಾಶವಿಲ್ಲ ಎಂದು ಮನಗಂಡೇ ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago