ಬೆಂಗಳೂರು: ಜೂ. 21 ರಂದು ವಿಶ್ವ ಯೋಗ ದಿನದ ಅಂಗವಾಗಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಪ್ರಧಾನಿ ಆಗಮನದ ವೇಳೆ ಕೈಗೊಳ್ಳಬೇಕಾದ ಕ್ರಮ, ವೇದಿಕೆ ಕಾರ್ಯಕ್ರಮಗಳು, ಸೂಕ್ತ ಭದ್ರತೆ, ಜವಾಬ್ದಾರಿ ಹಂಚಿಕೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮೊದಲಾದವರು ಹಾಜರಿದ್ದರು.
ಮೈಸೂರು ಜಿಲ್ಲಾಧಿಕಾರಿ, ಎಸ್ಪಿ ಮೊದಲಾದವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿಎಂ ಜೊತೆ ಚರ್ಚೆ ಮಾಡಿದರು.