ಮೈಸೂರು

ಮತ್ತೊಮ್ಮೆ ಮೋದಿ ಸರ್ಕಾರ ಎಂದು ಕನ್ನಡದ ಮನಸ್ಸುಗಳು ಹೇಳಿವೆ: ಪ್ರಧಾನಿ ಮೋದಿ

ಮೈಸೂರು: ನಿಮಗೆಲ್ಲಾ ನನ್ನ ಮನಸ್ಕಾರಗಳು ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಮೋದಿ, ಚೈತ್ರ ನವರಾಯ್ರತಿಯ ಸಂದರ್ಭದಲ್ಲಿ ಚಾಮುಂಡಿ, ಭುವನೇಶ್ವರಿ ಹಾಗೂ ಕಾವೇರಿ ತಾಯಿಯ ಚರಣಗಳಿಗೆ ನಮಸ್ಕರಿಸುತ್ತೇನೆ. ಈ ದೇಶದ ಅತ್ಯಂತ ಹಿರಿಯ ನಾಯಕ ಎಚ್‌.ಡಿ ದೇವೇಗೌಡರ ಆಶೀರ್ವಾದ ಸಿಕ್ಕಿರುವುದು ನಮ್ಮ ಸೌಭಾಗ್ಯವಾಗಿದೆ. ನಮಗೆ ಇಡೀ ಕರ್ನಾಟಕದ ಆಶೀರ್ವಾದ ಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿ ಮಾತನಾಡಿದ ಪ್ರಧಾನಿ ಮೋದಿ, ಹಿರಿಯ ಮತ್ಸದಿ ಎಚ್‌ಡಿಡಿ ಅವರ ಆಶೀರ್ವಾದ ನಮಗೆ ಶ್ರೇಯವಾಗಲಿದೆ. ಪೂರ್ಣ ಕರ್ಣಾಟಕ ಹೇಳುತ್ತಿದೆ ಮತ್ತೊಮ್ಮೆ ಎನ್‌ಡಿಎ ಎಂದು. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಮೋದಿಯ ಗ್ಯಾರೆಂಟಿಯಾಗಿದೆ. ಇದರನ್ವಯ ದೇಶದಲ್ಲಿ ಮುಂದಿನ ದಿನಗಳಲ್ಲಿ ಮೂರು ಕೋಟಿ ಮನೆ ನಿರ್ಮಾಣ ಮಾಡಲಾಗುವುದು. ದೇಶಾದ್ಯಂತ ಐದು ವರ್ಷಗಳವರೆಗೆ ಉಚಿತ ಪಡಿತರ ದೊರೆಯಲಿದೆ. ೭೦ ವರ್ಷ ಮೇಲ್ಪಟ್ಟವರೊಗೆ ಆಯುಷ್ಮಾನ್‌ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ, ಮನೆ ಒಡತಿಗೆ ಮೂರು ಕೋಡಟಿ ಮಹಿಳೆಯರನ್ನು ಲಕ್‌ಪತಿ ದೀದಿ ಮಾಡುತ್ತೇವೆ ಇವೆಲ್ಲವೂ ಮೋದಿ ಗ್ಯಾರೆಂಟಿಯಾಗಿದೆ ಎಂದು ಭರ್ಜರಿ ಪ್ರಚಾರ ಮಾಡಿದರು.

ಮೈಸೂರು, ಹಂಪಿ ಹಾಗೂ ಬಾದಾಮಿ ಪ್ರಸಿದ್ಧ ಪ್ರವಾಸಿ ಸ್ಥಳಗಳನ್ನು ವರ್ಲ್ಡ್‌ ಟೂರಿಸಂ ಪಟ್ಟಿಗೆ ಸೇರಿಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡ ದೇಶದ ಸಮೃದ್ಧಿ ಭಾಷೆವಾಗಿದೆ. ಎನ್​ಡಿಎ ಏನು ಹೇಳುತ್ತೋ ಅದನ್ನು ಮಾಡಿ ತೋರಿಸುತ್ತದೆ. ತ್ರಿವಳಿ ತಲಾಖ್, ಮಹಿಳೆಯರಿಗೆ ಮೀಸಲಾತಿ, ರಾಮಮಂದಿರ ನಿರ್ಮಾಣ. ಬಿಜೆಪಿಯ ಸಂಕಲ್ಪ ಅದು ಮೋದಿಯ ಗ್ಯಾರಂಟಿ ಆಗಿರುತ್ತದೆ. ಇವೆಲ್ಲಕ್ಕೂ ಶಕ್ತಿ ನಿಮ್ಮ ಮತದಿಂದ ಸಿಗಲಿದೆ. ನಿಮ್ಮ ಪ್ರತಿಯೊಂದು ಮತವು ಮೋದಿಗೆ ಶಕ್ತಿ ನೀಡುತ್ತದೆ. ಎನ್‌ಡಿಎ ಎಚ್‌ಡಿಡಿ ಮಾರ್ಗದರ್ಶನವಿದೆ. ಬಿಎಸ್‌ವೈ ನಾಯಕತ್ವ ಹಾಗೂ ಎಚ್‌ಡಿಕೆ ಚಾಕಚಕ್ಕತೆ ಇವೆಲ್ಲೂ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ತುಕ್ಡೆ-ತುಕ್ಡೆ ಗ್ಯಾಂಗ್‌ನ ಸಲ್ತಾನ್‌ ಆಗಿ ಓಡಾಡುತ್ತಿದೆ. ಇಲ್ಲಿ ದೇಶವನ್ನು ಒಡೆಯುವ, ದೋಚುವ ಕಳ್ಳರಿದಾರೆ. ಕಾಂಗ್ರೆಸ್‌ ದೇಶದ ವಿರುದ್ಧವೇ ಮಾತನಾಡುತ್ತದೆ. 370 ಆರ್ಟಿಕಲ್​ ವಿದಿಯ ಬಗ್ಗೆ ಕಾಂಗ್ರೆಸ್​ ಪಕ್ಷದ ಅಧಕ್ಷರು ಮಾತನಾಡಿದ್ರು. 370 ಆರ್ಟಿಕಲ್​ಗೂ ಕಾಶ್ಮೀರಿಗೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ರು. ಭಾರತ ಮಾತೆ ಜೈ ಹೇಳೋಕೆ ಯಾರ ಅನುಮತಿ ಪಡೆಯಬೇಕು ಎನ್ನುತ್ತಾರೆ. ಇಂತವರೊಂದಿಗೆ ನೀವು ನಿಲ್ಲುತ್ತೀರಾ ಎಂದು ಪ್ರಶ್ನಿಸಿದರು.

ಈ ಲೋಕಸಭಾ ಚುನಾವಣೆ ಮುಂದಿನ 5 ವರ್ಷ ಬಹಳ ಮಹತ್ವದ್ದಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಇದು ಮೋದಿ ಗ್ಯಾರಂಟಿ. ದೇವೇಗೌಡರು ಕೂಡ ಭಾಷಣದಲ್ಲಿ ಗ್ಯಾರಂಟಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮುಂದಿನ 5 ವರ್ಷಗಳವರೆಗೆ ಉಚಿತ ರೇಷನ್ ನೀಡುತ್ತೇವೆ. 75 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ. ಬಡವರಿಗೆ ಹೊಸ ಮನೆಗಳನ್ನು ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

6 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago