ಮೈಸೂರು

ಐವರು ಯುವಕರ ಮೇಲೆ ಪೊಲೀಸರ ದೌರ್ಜನ್ಯ : ಪೊಲೀಸರ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ತಿ.ನರಸೀಪುರ : ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ದಾಯಾದಿ ಕಲಹ ಆರೋಪದ ವಿಚಾರಣೆಗೆ ಐವರು ಯುವಕರನ್ನು ಪೊಲೀಸ್ ಠಾಣೆಗೆ ಕರೆದು ಯಾವುದೇ ಲಿಖಿತ ದೂರು ಇಲ್ಲದಿದ್ದರೂ ಪೊಲೀಸರು ಅಮಾನುಷವಾಗಿ ಹಲ್ಲೇ ನಡೆಸಿರುವ ಘಟನೆ ಶುಕ್ರವಾರ ನಡೆದಿದ್ದು, ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಕ್ರಮವನ್ನು ಜರುಗಿಸುವಂತೆ ದಲಿತ ಸಂಘರ್ಷ ಸಮಿತಿ ಹಾಗೂ ಸಂತ್ರಸ್ತ ಯುವಕರು ಹಿರಿಯ ಪೋಲಿಸ್ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವನ್ನು ಅಗ್ರಹಿಸಿದ್ದಾರೆ.

ತಾಲೂಕಿನ ತುಂಬಲ ಗ್ರಾಮದ ಆನಂದ್, ಅರ್ಜುನ್, ಪೃಥ್ವಿ, ಪ್ರವೀಣ್ ಹಾಗೂ ಅಪ್ಪು ಪೊಲೀಸರಿಂದ ಹಲ್ಲೆಗೊಳಗಾದ ಯುವಕರಾಗಿದ್ದು, ಆನಂದ್ ಹಾಗೂ ಅರ್ಜುನ್ ಅವರಿಬ್ಬರ ದೇಹದ ಹಿಂಭಾಗದ ಕುಂಡಿಗಳು ಪೊಲೀಸರ ಏಟಿನಿಂದಾಗಿ ನೀಲಿಗಟ್ಟಿದ್ದು, ಪೃಥ್ವಿಯ ಬೆನ್ನು ಹಾಗೂ ಪ್ರವೀಣ್ ತೊಡೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ, ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಧೂಳಶೆಟ್ಟಿ, ಎ ಎಸ್ ಐ ಶಂಕರ್ ಹಾಗೂ ಇಬ್ಬರು ವೇದಗಳ ವಿರುದ್ಧ ನಂಜನಗೂಡು ಉಪ ವಿಭಾಗದ ಡಿ ವೈ ಎಸ್ ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಲ್ಲೆಗೊಳಗಾದ ಯುವಕರು ತಿಳಿಸಿದ್ದಾರೆ.

ಪೊಲೀಸರು ದೌರ್ಜನ್ಯ ನಡೆಸಿರುವ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯನ್ನು ನಡೆಸಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಆಲಗೂಡು ಶಿವಕುಮಾರ್ ಮಾತನಾಡಿ, ಆ.೨೮ ರಂದು ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ದಯಾದಿಗಳ ಕಲಹವನ್ನು ನೆಪವಾಗಿಟ್ಟುಕೊಂಡು ವಾರಗಳ ಕಾಲ ಯುವಕರನ್ನ ಪೊಲೀಸ್ ಠಾಣೆಗೆ ಅಲೆದಾಡಿಸಿದ ಪೊಲೀಸರು ಶುಕ್ರವಾರ ಠಾಣೆಯಲ್ಲಿ ಮನಸೋಯಿಚ್ಛೆ ಥಳಿಸಿ, ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತುಂಬಲ ಗ್ರಾಮದಲ್ಲಿನ ಐವರು ದಲಿತ ಯುವಕರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದು ಅಕ್ಷಮ್ಮ್ಯವಾಗಿದೆ. ಈ ವೇಳೆ ಯುವಕರ ಜಾತಿಯನ್ನು ನಿಂದಿಸಲಾಗಿದೆ. ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಇನ್ಸ್ತ್ರ್ಪೆಕ್ಟರ್, ಸಬ್ ಇನ್ಸ್ತ್ರ್ಪೆಕ್ಟರ್, ಎ ಎಸ್ ಐ ಹಾಗೂ ಇಬ್ಬರು ವೇದಗಳ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮವನ್ನ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂತ್ರಸ್ತ ಯುವಕ ಆನಂದ್ ಮಾತನಾಡಿ, ಏಳೆಂಟು ದಿನಗಳ ಕಾಲ ಪೊಲೀಸ್ ಠಾಣೆಗೆ ಅಲೆದಾಡಿದ ಪೊಲೀಸರು ಯಾವುದೇ ದೂರು ಇಲ್ಲದಿದ್ದರೂ ನಮ್ಮ ಮೇಲೆ ಶುಕ್ರವಾರ ಇನ್ಸ್ತ್ರ್ಪೆಕ್ಟರ್ ಧನಂಜಯ ಸೇರಿದಂತೆ ಪಿಎಸ್‌ಐ ಜಗದೀಶ್ ದೂಳಶೆಟ್ಟಿ, ಎ ಎಸ್ ಐ ಶಂಕರ್ ಹಾಗೂ ಇಬ್ಬರು ಸಿಬ್ಬಂದಿಗಳು ನಮ್ಮ ಮೇಲೆ ಮನಬಂದಂತೆ ಫೈಬರ್ ಲಾಟಿ, ಬ್ಯಾಟ್, ದೊಣ್ಣೆ ಹಾಗೂ ಇನ್ನಿತರ ವಸ್ತುಗಳಿಂದ ಹಲ್ಲೆಯನ್ನ ನಡೆಸಿದ್ದಾರೆ. ಈ ವೇಳೆ ಜಗದೀಶ ದೂಳಶೆಟ್ಟಿ ಜಾತಿಯನ್ನು ನಿಂದಿಸಿದರು. ಕುಡಿಯಲು ನೀರು ಕೊಡದೆ ನೆಲಕ್ಕೆ ನೀರು ಸುರಿದು ಬರಿಗೈನಲ್ಲಿ ವರೆಸುವಂತೆ ಹಿಂಸೆ ನೀಡಿದರು. ಅನಗತ್ಯವಾಗಿ ನಮ್ಮ ಮೇಲಾಗಿರುವ ದೌರ್ಜನ್ಯಕ್ಕೆ ಹಿರಿಯ ಅಧಿಕಾರಿಗಳು ನ್ಯಾಯವನ್ನು ನೀಡಬೇಕೆಂದು ಮನವಿ ಮಾಡಿದರು.

ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಕುಕ್ಕೂರು ರಾಜು ಮಾತನಾಡಿ, ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ ಅವರು ದರ್ಪ ತೋರುವುದು, ದೌರ್ಜನ್ಯವನ್ನು ನಡೆಸುವುದನ್ನು ದಕ್ಷತೆ ಎಂದುಕೊಂಡಂತಿದೆ. ವಿಚಾರಣೆಯ ವೇಳೆ ಕನಿಷ್ಠ ಮಾನವೀಯತೆಯನ್ನು ತೋರದೆ ದಲಿತ ಯುವಕರ ಮೇಲೆ ಸಿಬ್ಬಂದಿಗಳೊಂದಿಗೆ ಸೇರಿಕೊಂಡು ಹಲ್ಲೇ ನಡೆಸಿರುವ ವರ್ತನೆಯ ವಿರುದ್ಧ ಕ್ರಮವಾಗಲೇಬೇಕು. ರಾಜ್ಯದಲ್ಲಿ ದಲಿತರಿಗೆ ರಕ್ಷಣೆಯನ್ನ ನೀಡುತ್ತಾರೆ ಎಂಬ ನಂಬಿಕೆಯಿಂದ ದಲಿತರು ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಹಾಗಾಗಿ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತ ಯುವಕನ ತಾಯಿ ರಾಜೇಶ್ವರಿ, ಸೇವಾಶ್ರಯ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಆರ್.ಮಣಿಕಂಠ ರಾಜ್ ಗೌಡ, ಮುಖಂಡರಾದ ಗಾಂಧಿನಗರ ಮಂಜುನಾಥ್, ಆಲಗೂಡು ನಾಗರಾಜ ಮೂರ್ತಿ, ಶಾಂತಕುಮಾರ್, ಬಿಳಿಗೆರೆಹುಂಡಿ ಶಿವಕುಮಾರ್, ಸಿದ್ದರಾಜು, ಉಕ್ಕಲಗೆರೆ ರಾಜು, ಹೊನ್ನಯ್ಯ ಹಾಗೂ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

36 mins ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

47 mins ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

1 hour ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

2 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

2 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

3 hours ago