ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ ಇರುವುದು ತಿಳಿದುಬಂದಿದೆ.
ಆರು ತಿಂಗಳ ಹಿಂದೆ ನಗರದ ಜಿಲ್ಲಾ ಪಂಚಾಯಿತಿ ಬಳಿ ಇರುವ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪರಿಶೀಲನೆ ನಡೆಸಿದ ನ್ಯಾಯಾಧೀಶರು ಈ ವಿಚಾರವನ್ನು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದರು. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ದೃಢಪಟ್ಟಿತ್ತು.
ಆರು ತಿಂಗಳ ಅವಧಿಯಲ್ಲಿ ಎರಡುಬಾರಿ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆದರೆ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಕಾರಣ ಆರೋಪಿಗಳು ನಕಲಿ ಐಡಿ ಬಳಸಿ ಇ-ಮೇಲ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ.
ಆರೋಪಿಗಳು ತಮಿಳುನಾಡು, ಆಂದ್ರಪ್ರದೇಶ, ಉತ್ತರ ಪ್ರದೇಶ ಹೀಗೆ ವಿವಿಧ ಸ್ಥಳಗಳ ವಿಳಾಸವನ್ನು ಐಪಿ ವಿಳಾಸದಲ್ಲಿ ತೋರಿಸಿರುತ್ತಾರೆ. ಆರೋಪಿಗಳ ವಿಳಾಸ ಹುಡಿಕೊಂಡು ಹೋಗುವ ಪೊಲೀಸರಿಗೆ ವಿಳಾಸ ನಕಲಿ ಎಂಬುದು ಗೊತ್ತಾಗುತ್ತದೆ. ಇನ್ನು ಅವರ ಇ-ಮೇಲ್‌ನಲ್ಲಿ ಯಾವುದೇ ದೂರವಾಣಿ ಸಂಖ್ಯೆ ಇರುವುದಿಲ್ಲ. ಅಥವ ನಕಲಿ ಮೊಬೈಲ್ ಸಂಖ್ಯೆ ದಾಖಲಾಗಿರುತ್ತದೆ. ಹೀಗಾಗಿ ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಆದರೂ ನಗರದ ಸೈಬರ್ ವಿಭಾಗ ಅಪರಾಧಿಗಳ ಪತ್ತೆಗೆ ನಿರಂತರ ಪ್ರಯತ್ನ ಹಾಕುತ್ತಿದೆ. ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ವಿಶ್ವಾಸದಿಂದಲೇ ಹೇಳುತ್ತಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…