ಮೈಸೂರು

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ.

ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದ ಎನ್‌ಸಿಬಿ ತಂಡದ ವಶದಲ್ಲಿರುವ ಗಣಪತ್ ಲಾಲ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಿರೀಶ್ ಬಾಬು ಎಂಬವರಿಗೆ ಸೇರಿದ ಕಟ್ಟಡವನ್ನು ಗಣಪತ್ ಬಾಡಿಗೆಗೆ ಪಡೆದಿದ್ದರು. ಆ ಕಟ್ಟಡದಲ್ಲಿ ಮಾದಕ ವಸ್ತು ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಇನ್‌ಸ್ಪೆಕ್ಟರ್ ಎಂ.ಎಲ್.ಶೇಖರ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ರಾತ್ರಿ 7.15ಕ್ಕೆ ದಾಳಿ ನಡೆಸಿದೆ. ಕಟ್ಟಡದ ಒಂದನೇ ಅಂತಸ್ತಿನ ಕೊಠಡಿಯ ವಾಡ್ರೂಬ್‌ನ ಶೆಲ್ಛ್‌ಗಳಲ್ಲಿ ನಾನಾ ಕಂಪೆನಿಗಳ 11 ಸ್ಮಾರ್ಟ್ ಫೋನ್ ಪತ್ತೆಯಾಗಿವೆ.

ಕೆಳ ಭಾಗದಲ್ಲಿ ಕಪ್ಪು ಬಣ್ಣದ 360 ಗ್ರಾಂ ತೂಕದ ಪುಡಿ, 54 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 957 ಗ್ರಾಂ ತೂಕದ ಬಿಳಿ ಬಣ್ಣದ ಪುಡಿ, 2933 ಗ್ರಾಂ ತೂಕದ ಗಸೆಗಸೆ ಮಾದರಿ ವಸ್ತು, ಕಪ್ಪು ಬಣ್ಣದ ಪೇಸ್ಟ್ ಮಾದರಿಯ ವಸ್ತು, ಬೋರಿಕ್ ಆಸಿಡ್ ಪತ್ತೆಯಾಗಿದೆ. ಇದರೊಂದಿಗೆ 13 ನೀಲಿ ಬಣ್ಣದ ಕ್ಯಾನ್‌ಗಳಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಂಡು ಎಫ್ಎಸ್‌ಎಲ್ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ‌.

ಮನೆ ಬಾಡಿಗೆ ಪಡೆದಿದ್ದ ಗಣಪತ್ ಲಾಲ್, ಅಲ್ಲಿ ವಾಸವಿದ್ದ ಭಜನ್ ಲಾಲ್ ಮತ್ತು ಆತನ ಪತ್ನಿ ವಿರುದ್ಧ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago