ಮೈಸೂರು

ಮೈಸೂರಲ್ಲಿ ಪತ್ತೆಯಾದ ಎಂಡಿಎಂಎ ಮೂಲ ಪತ್ತೆಹಚ್ಚಿದ ಪೊಲೀಸರು ; ಕೊರಿಯರ್‌ ಮೂಲಕ ರವಾನೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ.

ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಗಮನ ಸೆಳೆದಿದ್ದ ಈ ಗಾಂಜ ಪತ್ತೆ, ಸಂಸತ್ತಿನಲ್ಲಿ ಪ್ರತಿಧ್ವನಿಸಿತ್ತು. ಮೈಸೂರು-ಕೊಡಗು ಸಂಸದ ಯದುವೀರ್‌ ವಿಷಯ ಪ್ರಸ್ತಾಪಿಸಿ ಪೊಲೀಸ್‌ ವೈಫಲ್ಯದ ಬಗ್ಗೆ ಪ್ರಶ್ನಿಸಿದ್ದರು. ಇದೀಗ ಬಹಿರಂಗಗೊಂಡಿರುವ ಮಾಹಿತಿ ಪ್ರಕಾರ, ಗಾಂಜ ಜಾಲದ ಮೂಲ ಮನಿ ಕ್ಯಾಪಿಟಲ್‌ ಸಿಟಿ ಮುಂಬೈ ಆಗಿದೆ. ಈ ಜಾಲ ಕೊರಿಯರ್‌ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ರವಾನೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜುಲೈ 04 ರಂದು ಕೇಂದ್ರ ಬಾಂಬೆಯ ಪ್ರದೇಶವೊಂದರಿಂದ ಬೆಂಗಳೂರಿಗೆ ಎಂಡಿಎಂಎ‌ JD-ಕೊರಿಯರ್ ಮೂಲಕ ರವಾನೆಯಾಗಿದೆ. ಈ ಕೊರಿಯರ್‌ ಬೆಂಗಳೂರಿಂದ ಜು. 07 ರಂದು ಮೈಸೂರಿಗೆ ತಲುಪಿದೆ. 333 ಕೆ.ಜಿ ತೂಕದ ಗಾಂಜ ತುಂಬಿದ ಒಟ್ಟು 16 ರಿಂದ 17 ಬ್ಯಾಗುಗಳಲ್ಲಿ ಗಾಂಜ JD-ಕೊರಿಯರ್‌ ಮೂಲಕ ಮುಂಬೈನಿಂದ ಕರ್ನಾಟಕಕ್ಕೆ ರವಾನೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

3 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

4 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

4 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

4 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

4 hours ago