Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಾವೇರಿ ಜಲಾನಯದ ಪ್ರದೇಶಗಳು ಮಲೀನ: ಸರ್ಕಾರಕ್ಕೆ ವರದಿ ಸಲ್ಲಿಸಿದ ತಾಂತ್ರಿಕ ಸಮಿತಿ

ಮೈಸೂರು: ಹಳೇ ಮೈಸೂರು ಭಾಗದ ಜೀವ ನದಿಗಳಾದ ಕಾವೇರಿ, ಲಕ್ಷಣ ತೀರ್ಥ ಹಾಗೂ ಕಪಿನ ನದಿಗಳು ಕಳವಳಕಾರಿ ಪ್ರಮಾಣದಲ್ಲಿ ಮಲೀನಗೊಂಡಿರುವ ಬಗ್ಗೆ ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ನದಿಗಳಿಗೆ ಮಲೀನ ನೀರು ಸೇರದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ಕಾರ್ಖಾನೆಯಿಂದ ತ್ಯಾಜ್ಯವನ್ನು ಸಮರ್ಪಕವಾಗಿ ಬೇರ್ಪಡಿಸದೆ ನೇರವಾಗಿ ನದಿಗೆ ಹರಿಸುತ್ತಿರುವುದು. ಕೃಷಿ ತ್ಯಾಜ್ಯ, ಬಯಲು ಶೌಚ್ಯ, ಪಟ್ಟಣ ಮತ್ತು ನಗರ ಪ್ರದೇಶಗಳ ಘನತ್ಯಾಜ್ಯಗಳು ನೇರವಾಗಿ ನದಿಗಳ ಒಡಲು ಸೇರುತ್ತಿರುವುದು ಮಾಲಿನ್ಯಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮಿತಿಯು ವೈಜ್ಞಾನಿಕವಾಗಿಯೇ ಅಧ್ಯಯನ ನಡೆಸಿ ಸಿದ್ಧಪಡಿಸಿದ ಕರಡು ವರದಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಕಚೇರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags: