ಮೈಸೂರು

ಪಿಒಪಿ, ಬಣ್ಣ ಲೇಪಿತ ವಿಗ್ರಹ| ಜಲ ಮೂಲಗಳಿಗೆ ವಿಸರ್ಜನೆ ನಿಷೇಧ: ಎಡಿಸಿ ಡಾ.ಪಿ ಶಿವರಾಜು

ಮೈಸೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು.

ಅವರು ಇಂದು(ಆ.23) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ಗೌರಿ -ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿ ಮತ್ತು ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳನ್ನು ಪೂಜಿಸಿ ಸರಳ ಆಚರಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಷೇಧಿತ ಪಿ.ಓ.ಪಿ. ಗಣೇಶ ಮೂರ್ತಿಗಳಿರುವ ಬಗ್ಗೆ ಮಾಹಿತಿ, ದೂರು ಸ್ವೀಕೃತವಾದರೆ, ಪ್ರತಿದಿನ ಅಧಿಕಾರಿಗಳು ಗಸ್ತು ತಿರುಗಿ ಕ್ರಮಕೈಗೊಳ್ಳಬೇಕು. ಪಿ.ಒ.ಪಿ. ವಿಗ್ರಹಗಳೆಂದು ಖಚಿತಪಟ್ಟಲ್ಲಿ ನಿಯಮಾನುಸಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಸಾರ್ವಜನಿಕರಿಗೆ ದೂರದರ್ಶನ ಜಾಹಿರಾತು ಮತ್ತು ಜನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ವಿಗ್ರಹ ತಯಾರಕರು, ಮಾರಾಟಗಾರರು ಮತ್ತು ಗಣಪತಿ ಕೂರಿಸುವ ಸಂಘ ಸಂಸ್ಥೆಗಳಿಗೆ ಅನುಮತಿ ನೀಡಲು ಪೋಲಿಸ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಅಗ್ನಿಶಾಮಕದಳ ಇಲಾಖೆಗಳನೊಳಗೊಂಡ ಏಕಗವಾಕ್ಷಿ ಸಮಿತಿಯನ್ನು ರಚಿಸಲು ಸೂಚಿಸಿ, ಆ ಸಮಿತಿಯು ಗಣೇಶ ಮೂರ್ತಿ ಸ್ಥಾಪನೆಗೆ ಕೋರಿ ಸಲ್ಲಿಸುವ ಅರ್ಜಿಯನ್ನು 24 ಗಂಟೆಯೊಳಗೆ ವಿಲೇವಾರಿ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಷರತ್ತುಬದ್ಧ ಪ್ರಮಾಣ ಪತ್ರವನ್ನು ನೀಡಬೇಕು. ತಾಲ್ಲೂಕು ಮಟ್ಟದ ಕಾರ್ಯಪಡೆಯಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿದ್ದು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಿ.ಓ.ಪಿ. ವಿಗ್ರಹಗಳನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲು ಸೂಕ್ತ ಕ್ರಮವಹಿಸಬೇಕು ಎಂದರು.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ , ನಗರಸಭೆ, ಪುರಸಭೆ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು ಹಾಗೂ ಈ ಸಂಬಂಧ ಜಾಹಿರಾತು ಹೊರಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ / ನಗರಸಭೆ / ಪುರಸಭೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಸ್ಥಾಪನೆಯನ್ನು ಗುರುತಿಸಿ, ಉತ್ತೇಜಿಸಲು ಕ್ರಮವಹಿಸಬೇಕು ಹಾಗೂ ರಾತ್ರಿ 10 ಗಂಟೆಯಿಂದ ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಬೇಕು ಎಂದರು.

ಗಣೇಶ ಹಬ್ಬದ ಆಚರಣೆಯ ಸಮಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರುಶುಭಾ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

6 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

25 mins ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

36 mins ago

ವಿವಾದದ ನಡುವೆಯೂ ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳದನಲ್ಲಿ ಬಾಡೂಟ ವಿತರಣೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…

47 mins ago

ಕುವೈತ್‌ ಪ್ರವಾಸ: ಪ್ರಧಾನಿ ಮೋದಿಗೆ 20ನೇ ಅಂತರಾಷ್ಟ್ರೀಯ ಗೌರವ

ಕುವೈತ್‌/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌…

1 hour ago

ಮೈಸೂರಿನಲ್ಲಿ ನಿಮ್ಹಾನ್ಸ್‌ ಘಟಕ ಸ್ಥಾಪನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…

1 hour ago