ಮೈಸೂರು

ವಿವಾಹಿತ ಪುತ್ರಿಯ ಅಶ್ಲೀಲ ವಿಡಿಯೋ ವೈರಲ್‌ : ಕೈ ಮುಖಂಡನ ವಿರುದ್ಧ ತಂದೆ ದೂರು

ಮೈಸೂರು : ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ನಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?
ಅ. 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಮೂರು ತಿಂಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಮರಹಳ್ಳಿ ಗ್ರಾಮದ ವ್ಯಕ್ತಿ ಜೊತೆಗೆ ಮಗಳ ಮದುವೆ ಮಾಡಿರುತ್ತೇನೆ. ನನ್ನ ಮಗಳು ಮತ್ತು ಅಳಿಯ ಅನ್ಯೋನ್ಯವಾಗಿದ್ದರು.

ದೀಪಾವಳಿ ಹಬ್ಬದ ಹಿನ್ನೆಲೆ ನನ್ನ ಮಗಳು ನಮ್ಮ ಮನೆಗೆ ಬಂದಿದ್ದಳು. ಹೀಗಿರುವಾಗ ಅ.16ರಂದು ಬೆಳಿಗ್ಗೆ 10 ಗಂಟೆಗೆ ನನ್ನ ಸಂಬಂಧಿಕರು ನಮ್ಮ ಜಮೀನಿನ ಬಳಿ ಸಿಕ್ಕು, ನಿಮ್ಮ ಮಗಳು ಮತ್ತು ನಿಮ್ಮೂರಿನ ಲೋಹಿತ್ ಅಲಿಯಾಸ್ ರಾಜಿ ಇಬ್ಬರ ಅಶ್ಲೀಲ ವಿಡಿಯೋ ಮಲ್ಲಿಕಾರ್ಜುನ ಎಂಬುವವರ ವಾಟ್ಸಾಪ್ ನಂಬರ್‌ಗೆ ಬಂದಿದ್ದು, ಆತನು ನನ್ನ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದು, ಏನೆಂದು ವಿಡಿಯೋ ನೋಡಲಾಗಿ ಅದು ನಿಮ್ಮ ಮಗಳ ಮತ್ತು ಲೋಹಿತ್ ಅಶ್ಲೀಲ ವಿಡಿಯೋ ಆಗಿತ್ತು. ಬಳಿಕ ಡಿಲೀಟ್ ಮಾಡಿರುವುದಾಗಿ ನನಗೆ ಹೇಳಿದ್ದಾರೆ.

ನಮಗೂ ನಮ್ಮೂರಿನ ಲೋಹಿತ್ ಎಂಬುವನಿಗೂ ಜಮೀನು ದಾರಿ ವಿಚಾರವಾಗಿ ಆಗಾಗ ಗಲಾಟೆಯಾಗಿದ್ದು, ನಿನಗೆ ಮತ್ತು ನಿಮ್ಮ ಕುಟುಂಬಕ್ಕೆ ಒಂದು ಗತಿ ಕಾಣಿಸುತ್ತೇನೆ ನೋಡು, ಒಂದಲ್ಲ ಒಂದು ದಿನ ನಿಮ್ಮನ್ನು ಕೊಲೆ ಮಾಡದೇ ಬಿಡುವುದಿಲ್ಲವೆಂದು ಪದೇ ಪದೇ ಹೇಳುತ್ತಿದ್ದನು. ಈ ದ್ವೇಷದಿಂದ ನನ್ನ ಮಗಳ ಮತ್ತು ನಮ್ಮ ಕುಟುಂಬದ ಮಾನಮರ್ಯಾದೆಯನ್ನು ಬೀದಿ ಪಾಲು ಮಾಡುವ ಉದ್ದೇಶದಿಂದ ನನ್ನ ಮಗಳೊಂದಿಗೆ ತೋಡಗಿದ ವಿಡಿಯೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಎಲ್ಲರಿಗೂ ವಾಟ್ಸಾಪ್‌ನಲ್ಲಿ ಕಳುಹಿಸಿ, ನನ್ನ ಮಗಳ ಮತ್ತು ನಮ್ಮ ಸಂಸಾರವನ್ನು ಹಾಳು ಮಾಡಿರುತ್ತಾನೆ. ಆದ್ದರಿಂದ ಲೋಹಿತ್ ಅಲಿಯಾಸ್ ರಾಜಿ ಎಂಬುವನ ಮೇಲೆ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

6 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago