ಮೈಸೂರು

ಲೋಕ ಚುನಾವಣೆ: ಯದುವೀರ್‌ ವಿರುದ್ಧ ಪೋಸ್ಟರ್‌ ಅಭಿಯಾನ!

ಮೈಸೂರು: ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ಚರ್ಚೆ ಮುನ್ನಲೆಗೆ ಬರುತ್ತಿದ್ದಂತೆ ರಾಜ ವಂಶಸ್ಥ ಯದುವೀರ್‌ ವಿರುದ್ಧ ಪೋಸ್ಟರ್‌ ಅಭಿಯಾನ ಶುರುವಾಗಿದೆ.

ರಾಜರಾಗಿರುವ ನೀವು ರಾಜರಾಗಿಯೇ ಇರಿ ಮಂತ್ರಿಯಾಗಬೇಡಿ ಎಂದು ಮನವಿ ಮಾಡಿದ್ದಾರೆ. ಯದು ರಾಜರೇ ನಿಮಗೆ ನಿಮ್ಮದೇ ಆದ ಘನತೆಯಿದೆ. ಅದನ್ನು ಮರೆತು ರಾಜಕೀಯಕ್ಕೆ ಬರಬೇಡಿ ಎಂದು ಯದುವೀರ್‌ ಅವರ ರಾಜಕೀಯ ಪ್ರವೇಶಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

ಮತ್ತೊಂದೆಡೆ ಸಂಸದ ಪ್ರತಾಪ್‌ ಸಿಂಹ ರಾಜರು ರಾಜಕೀಯಕ್ಕೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ. ಇತ್ತ ರಾಜವಂಶಸ್ಥ ಯದುವೀರ್‌ ಮಾತ್ರ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಇರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಯದುವೀರ್‌ ಮುಂದಿನ ನಡೆ ಬಗ್ಗೆ ಎಲ್ಲರೂ ಕಾಯುತ್ತಿದ್ದಾರೆ.

andolanait

Recent Posts

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 min ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

13 mins ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

23 mins ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

40 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

2 hours ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago