ಬಾಕಿ ಪಾವತಿಗೆ 3 ದಿನಗಳ ಗಡುವು
ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ.
ಕೆಲವು ಗ್ರಾಹಕರು, ಗ್ರಾಮ ಪಂಚಾಯತಿ ಕುಡಿಯುವ ನೀರು, ಬೀದಿ ದೀಪ ಸ್ಥಾವರಗಳನ್ನು ಒಳಗೊಂಡಂತೆ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿವೆ. ಈ ರೀತಿಯಾಗಿ ಬಿಲ್ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ವಿದ್ಯುತ್ ಕಡಿತಗೊಳಿಸಲು ಸೆಸ್ಕ್ ನಿರ್ಧರಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ ವಿದ್ಯುತ್ ಸರಬರಾಜಿನ, ವಿತರಣಾ ಲೈಸೆನ್ಸ್‌ದಾರರ ಷರತ್ತುಗಳು 2004 ಅನುಬಂಧ-04ರ ನಿಯಮ 4.18(ಜೆ) ಪ್ರಕಾರ “ಗ್ರಾಹಕರು ಬಿಲ್ ಪಾವತಿಗೆ ನೀಡಿರುವ ದಿನಾಂಕದೊಳಗೆ ಬಿಲ್ ಪಾವತಿಸದಿದ್ದರೆ, ನಿಗದಿತ ಗಡುವಿನ ದಿನಾಂಕದ ನಂತರ ಶುಲ್ಕ ಪಾವತಿಸದ ಗ್ರಾಹಕರಿಗೆ 15 ದಿನಗಳ ಸ್ಪಷ್ಟ ನೋಟೀಸ್ ನೀಡಿ, ಬಾಕಿ ಪಾವತಿಸದ ಕಾರಣಕ್ಕೆ ವಿದ್ಯುತ್ ಸ್ಥಾವರದ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಲೈಸೆನ್ಸ್‌ದಾರರು ಹೊಂದಿರುತ್ತಾರೆ”. ಅಲ್ಲದೇ ನಿಯಮ 2.11ರ ಪ್ರಕಾರ “ಬಿಲ್ ವಿತರಿಸಿದ ಬಳಿಕ 15 ದಿನಗಳ ಅವಧಿ ಬಿಲ್ ಪಾವತಿಗೆ ಅಂತಿಮ ಗಡುವಾಗಿರುತ್ತದೆ.” “ಗ್ರಾಹಕರಿಗೆ ನೀಡುವ ಬಿಲ್‌ನ ಹಿಂಬದಿಯ ಸೂಚನೆ 1ರಲ್ಲಿ ನಿಗದಿತ ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಈ ಬಿಲ್ ಅನ್ನೇ ವಿದ್ಯುತ್ ಸರಬರಾಜು ನಿಲ್ಲಿಸುವ 15 ದಿನಗಳ ನೋಟೀಸ್ ಎಂದು ಪರಿಗಣಿಸಬೇಕು ಎಂದು ನಮೂದಿಸಲಾಗಿದೆ ಹಾಗೂ ಹಿಂದಿನ ಬಾಕಿಗೆ ವಾಯ್ದೆ ದಿನಾಂಕ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಕುಡಿಯುವ ನೀರು, ಬೀದಿ ದೀಪಗಳ ಸೇವೆಗಳನ್ನು ಹೊರತುಪಡಿಸಿ ಎಲ್ಲ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆ ಒಳಗೊಂಡಂತೆ ತಮ್ಮ ಸ್ಥಾವರಗಳ ವಿದ್ಯುತ್ ಶುಲ್ಕ ಬಾಕಿಯನ್ನು 3 ದಿನದೊಳಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧಿಕೃತ ನಗದು ಕೌಂಟರ್, ಆನ್ ಲೈನ್ ಮೂಲಕ ಪಾವತಿಸುವಂತೆ ಕೋರಲಾಗಿದೆ. ಅಲ್ಲದೇ ನಿಗದಿತ ದಿನದೊಳಗೆ ವಿದ್ಯುತ್ ಶುಲ್ಕ ಬಾಕಿ ಪಾವತಿಸದಿದ್ದಲ್ಲಿ ಡಿಸೆಂಬರ್ 9, 2024ರ ಸೋಮವಾರ ಸಾಮೂಹಿಕವಾಗಿ ವಿದ್ಯುತ್ ಕಡಿತಗೊಳಿಸುವ ಅಭಿಯಾನದ ಮೂಲಕ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಸರ್ಕಾರಿ ಇಲಾಖೆಗಳು ತುರ್ತಾಗಿ ತಮ್ಮ ವಿದ್ಯುತ್ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕಿದೆ.
– ಜಿ. ಶೀಲಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರು.
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್…
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…
ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತು ತಮಿಳು…