ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ಮೇ.21 ರಂದು ವಿದ್ಯುತ್ ವ್ಯತ್ಯಯ

ಮೈಸೂರು:   ಮೇ 21 ರಂದು  ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ   ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು :ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ ವಿವರ್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರo ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಎನ್ಆರ್‌  ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

7 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

8 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

8 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

10 hours ago