ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್ ಈಶ್ವರ್ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ, ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಇನ್ನೊಂದು ಬಾರಿ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಮಗನೇ. ಅವನಿಗೆ ಅವನ ಭಾಷೆಯಲ್ಲೇ ಉತ್ತರ ಕೊಡುತ್ತಾ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ತಮ್ಮ ತಾಯಿ ವಿರುದ್ಧ ಮಾತನಾಡಿದ್ದನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಮೈಸೂರು | ಅರಮನೆ ಮುಂಭಾಗ ಧರೆಗುರುಳಿದ ಬೃಹತ್ ಮರ ; ಆಟೋ ಜಖಂ
ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ ಅವಹೇಳನವಾಗಿ ಮಾತಾಡಿದ್ದಾನೆ. ಮುಳ್ಳುಹಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್ ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರದ ಕಡೆಗೆ ಬಂದಿದ್ದರೆ ನೀನು ಕೂಡ ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ ಎಂದು ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಾಪ್ರಹಾರ ನಡೆಸಿದ್ದಾರೆ.
ಪ್ರಿಯಾಂಕ್ ವಿರುದ್ಧ ವಾಗ್ದಾಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರತಾಪ, ಶೈಕ್ಷಣಿಕ ಅರ್ಹತೆ ಮೀರಿದ ಐಟಿ-ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆಗೆ ಕೊಟ್ಟಿದ್ದಾರೆ. ಪಿಯುಸಿ ಫೇಲ್ ಆದ ಮಗನಿಗೆ ಅವರ ತಂದೆ ಒಳ್ಳೆಯ ಆಸ್ತಿ ಮಾಡಿ, ಸಚಿವ ಸ್ಥಾನ ಕೊಡಿಸಿದ್ದಾರೆ. ಎರಡೂವರೆ ವರ್ಷದಲ್ಲಿ ಅವರು ಮಾಡಿದ ಒಂದು ಸಾಧನೆ ಹೇಳಲಿ ಎಂದು ಸವಾಲು ಹಾಕಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…