ಮೈಸೂರು

ಪ್ರದೀಪ್‌ ಈಶ್ವರ್‌ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ : ಎಂಎಲ್‌ಎ ಪ್ರದೀಪ್‌ ಈಶ್ವರ್‌ ಬಣ್ಣ ನಿಂದಿಸಿದ ಪ್ರತಾಪ್‌ ಸಿಂಹ..!

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಶಾಸಕ ಪ್ರದೀಪ್ ಈಶ್ವರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನ ಹಾಗೂ ಪ್ರದೀಪ್‌ ಈಶ್ವರ್‌ ಅವರ ಬಣ್ಣದ ಬಗ್ಗೆ ನಿಂದಿಸಿ ಟೀಕೆಗಳನ್ನು ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ, ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಇನ್ನೊಂದು ಬಾರಿ ನನ್ನ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಮಗನೇ. ಅವನಿಗೆ ಅವನ ಭಾಷೆಯಲ್ಲೇ ಉತ್ತರ ಕೊಡುತ್ತಾ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ತಮ್ಮ ತಾಯಿ ವಿರುದ್ಧ ಮಾತನಾಡಿದ್ದನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಮೈಸೂರು | ಅರಮನೆ ಮುಂಭಾಗ ಧರೆಗುರುಳಿದ ಬೃಹತ್‌ ಮರ ; ಆಟೋ ಜಖಂ

ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ ಅವಹೇಳನವಾಗಿ ಮಾತಾಡಿದ್ದಾನೆ. ಮುಳ್ಳುಹಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್ ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರದ ಕಡೆಗೆ ಬಂದಿದ್ದರೆ ನೀನು ಕೂಡ ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ ಎಂದು ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಾಪ್ರಹಾರ ನಡೆಸಿದ್ದಾರೆ.

ಪ್ರಿಯಾಂಕ್‌ ವಿರುದ್ಧ ವಾಗ್ದಾಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ಮಾತನಾಡಿದ ಪ್ರತಾಪ, ಶೈಕ್ಷಣಿಕ ಅರ್ಹತೆ ಮೀರಿದ ಐಟಿ-ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆಗೆ ಕೊಟ್ಟಿದ್ದಾರೆ. ಪಿಯುಸಿ ಫೇಲ್ ಆದ ಮಗನಿಗೆ ಅವರ ತಂದೆ ಒಳ್ಳೆಯ ಆಸ್ತಿ ಮಾಡಿ, ಸಚಿವ ಸ್ಥಾನ ಕೊಡಿಸಿದ್ದಾರೆ. ಎರಡೂವರೆ ವರ್ಷದಲ್ಲಿ ಅವರು ಮಾಡಿದ ಒಂದು ಸಾಧನೆ ಹೇಳಲಿ ಎಂದು ಸವಾಲು ಹಾಕಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago