ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್.7) ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಜನಾಕ್ರೋಶ ಯಾತ್ರೆಗೆ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ.
ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರರು ಸಾಥ್ ನೀಡಿದ್ದಾರೆ.





