ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ.
ಪ್ರಜ್ವಲ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂಬುದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ, ನಮಗೂ ಸಹ ಗೊತ್ತಿಲ್ಲ. ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಪ್ರಜ್ವಲ್‌ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದ್ದರೆ ನೂರಕ್ಕೆ ನೂರು ಶಿಕ್ಷೆಯಾಗಲಿ ಎಂದು ನಮ್ಮ ನಾಯಕರು ಕುಮಾರಸ್ವಾಮಿಯವರು ಹೇಳಿದ್ದಾರೆ, ನಾನೂ ಸಹ ಹೇಳಿದ್ದೇನೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು, ಯಾವಾಗ ಬರುತ್ತಾರೆ, ಯಾವಾಗ ಬರುವುದಿಲ್ಲ, ಇದ್ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ? ಈಗಾಗಲೇ ಬ್ಲೂ ಕಾರ್ನರ್, ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿ ಎಂದು ಜಿಟಿಡಿ ತಿಳಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…