ಮೈಸೂರು

ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ: ಜಿಟಿ ದೇವೇಗೌಡ

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್‌ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ.

ಪ್ರಜ್ವಲ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂಬುದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್‌ ಮನೆಯವರಿಗೂ ಗೊತ್ತಿಲ್ಲ, ನಮಗೂ ಸಹ ಗೊತ್ತಿಲ್ಲ. ಪ್ರಜ್ವಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈಗಾಗಲೇ ಪ್ರಜ್ವಲ್‌ನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ತಪ್ಪು ಮಾಡಿದ್ದರೆ ನೂರಕ್ಕೆ ನೂರು ಶಿಕ್ಷೆಯಾಗಲಿ ಎಂದು ನಮ್ಮ ನಾಯಕರು ಕುಮಾರಸ್ವಾಮಿಯವರು ಹೇಳಿದ್ದಾರೆ, ನಾನೂ ಸಹ ಹೇಳಿದ್ದೇನೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಪ್ರಜ್ವಲ್‌ ವಿದೇಶಕ್ಕೆ ಯಾಕೆ ಹೋದರು, ಯಾವಾಗ ಬರುತ್ತಾರೆ, ಯಾವಾಗ ಬರುವುದಿಲ್ಲ, ಇದ್ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ? ಈಗಾಗಲೇ ಬ್ಲೂ ಕಾರ್ನರ್‌, ರೆಡ್‌ ಕಾರ್ನರ್‌ ನೋಟಿಸ್‌ ನೀಡಲಾಗಿದೆ. ಇನ್ನೇನಿದ್ದರೂ ಸರ್ಕಾರದ ಜವಾಬ್ದಾರಿ ಎಂದು ಜಿಟಿಡಿ ತಿಳಿಸಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago