ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ.
ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ(ಊಟ ) ನೀಡುತ್ತಿದ್ದ ದೇವಸ್ಥಾನದ ದಾಸೋಹ ಭವನದಲ್ಲಿ ಇಂದಿನಿಂದ ಬೆಳಗ್ಗೆ ತಿಂಡಿ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.
ಮಹದೇಶ್ವರ ಬೆಟ್ಟದ ಮಾದರಿಯಲ್ಲಿ ನಂಜುಂಡೇಶ್ವರನ ದೇವಸ್ಥಾನದಲ್ಲೂ ಊಟದ ವ್ಯವಸ್ಥೆ ಮಾಡಲಾಗಿದ್ದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಇಂದು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಉಚಿತ ಬಸ್ ವ್ಯವಸ್ಥೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲ ಭಕ್ತರ ಅನುಕೂಲಕ್ಕಾಗಿ ಬೆಳಿಗ್ಗೆ, ಮಧ್ಯಾಹ್ನ ರಾತ್ರಿ ಪ್ರಸಾದ ವಿತರಣೆ ಮಾಡಲಾಗುತ್ತದೆ.
ಈ ಮೂಲಕ ವರ್ಷದ ಎಲ್ಲಾ ದಿನಗಳಲ್ಲೂ ಭಕ್ತರಿಗೆ ನಂಜುಂಡೇಶ್ವರನ ಪ್ರಸಾದ ಇರಲಿದೆ.





