ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣೆ ಎದುರಿಸಲಲಿದ್ದಾರೆ.
ಈ ಬೆನ್ನಲ್ಲೇ ಕೊಡಗು-ಮೈಸೂರು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಟಿಕೆಟ್ ಗಿಟ್ಟಿಸಿಕೊಳ್ಳುವ ಆಶಯದಲ್ಲಿದ್ದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದು, ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ.
ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್‌ನಲ್ಲಿ Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಬರೆದುಕೊಂಡಿದ್ದಾರೆ.
ಆ ಮೂಲಕ ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದವಿರುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…