ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಪ್ರತಾಪ್ ಸಿಂಹರಿಗೆ ಟಿಕೆಟ್ ಕೈ ತಪ್ಪಿದೆ ಆದರೆ, ಅವರಿಗೆ ಮುಂದೆ ರಾಜ್ಯ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೈಸೂರಿನಲ್ಲಿ ಹೇಳಿದ್ದಾರೆ.
ನಗರದಲ್ಲಿ ಆಯೋಜಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಮಾತನಾಡಿದ ಅವರು, ಹತ್ತು ವರ್ಷಗಳ ಕಾಲ ಕ್ರೀಯಾಶೀಲಾ ಸಂಸದರಾಗಿ ಪ್ರತಾಪ್ ಸಿಂಹ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇದರ ನಡುವೆಯೂ ಕೂಡಾ ಪ್ರಧಾನಿ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನೇಮಕ ಮಾಡಿದ್ದಾರೆ. ಆದರೆ ಇದರ ಹಿಂದೆ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ರಾಜಕೀಯದಲ್ಲಿ ಉಜ್ವಲ ಭವಿಷ್ಯ ಇರುವುದನ್ನು ಮರೆಯಬಾರದು ಎಂದು ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ವಿವರಿಸಿದರು.
ಇದರ ಜೊತೆಗೆ ಯದುವೀರ್ ಮೈಸೂರು ಕ್ಷೇತ್ರಕ್ಕೆ ಅಭ್ಯರ್ಥಿಯಾಗಬೇಕು ಎಂಬುದು ರಾಷ್ಟ್ರೀಯ ವರಿಷ್ಠರ ತೀರ್ಮಾನವಾಗಿದೆ. ಮೈಸೂರು ರಾಷ್ಟ್ರದ ಏಳಿಗೆಗಾಗಿ ಮಹಾರಾಜರು ತಮ್ಮ ಜೀವನವನ್ನೇ ಸವೆಸಿದ ರೀತಿಯಲ್ಲಿ ಈ ಕ್ಷೇತ್ರದ ಅಭಿವೃದ್ಧಿಗಾಗಿ ಸಾಮಾನ್ಯ ವ್ಯಕ್ತಿಯ ಹಾಗೆ ರಾಜವಂಶಸ್ಥ ಯದುವೀರ್ ಅವರು ಕೆಲಸ ಮಾಡಲಿದ್ದಾರೆ ಎಂದರು.
ಇನ್ನು ಚಾಮರಾಜನಗರಕ್ಕೆ ಸರಳ ವ್ಯಕ್ತಿತ್ವದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಗೆಲ್ಲಿಸುವ ಜವಾಬ್ದಾರಿ ಪ್ರಜೆಗಳ ಮೇಲಿದೆ. ಅವರು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…