ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.
ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.
ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್‌ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.
ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…