ಮೈಸೂರು

ಅಶೋಕಪುರಂ ರೈಲ್ವೆ ಸ್ಟೇಷನ್‌ ಯಾರ್ಡ್‌ ಲೋಕಾರ್ಪಣೆಗೊಳಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.

ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.

ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್‌ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್‌ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ‌ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago