ಮೈಸೂರು: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ.
ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಯದುವೀರ್ ಒಡೆಯರ್ ಅವರಿಗಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಿಜವಾದರೂ ಅವರಲ್ಲಿರುವ ಬೇಸರ, ಟಿಕೆಟ್ ಸಿಗದಿರುವ ನೋವು ದೂರವಾಗಿಲ್ಲ ಎಂಬಂತೆ ಕಾಣುತ್ತಿದೆ.
ಯದುವೀರ್ ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಭರ್ಜರಿ ಪ್ರಚಾರ ಮಾಡುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಪ್ರಚಾರದ ಸಭೆಗಳಲ್ಲೆಲ್ಲಾ ತಾವು ಮಾಡಿದ ಸಾಧನೆಗಳನ್ನೇ ಹೇಳುತ್ತಾ ತಮಗೆ ಟಿಕೆಟ್ ಸಿಗದಿರುವುದಕ್ಕೆ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ಹಲವರ ಆರೋಪವಾಗಿತ್ತು. ಅದಕ್ಕೆ ಪುಷ್ಠಯಂಬಂತೆ ಕಾರ್ಯಕ್ರಮದ ಮಧ್ಯದಲ್ಲಿಯೇ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿಯೂ ಸಹಾ ಸಭೆ ತೊರೆದ ಸಂಸದ ಪ್ರತಾಪ್ ಸಿಂಹರ ನಡೆ ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ.
ಅಷ್ಟಕ್ಕೂ ಅವರು ಹೀಗೆ ಮಾಡಿದ್ದಾದರೂ ಯಾಕೆ? ಮತ್ತು ವಿಜಯೇಂದ್ರ ಅವರ ಬಳಿ ಯಾವ ಕಾರಣ ನೀಡಿ ತೆರಳಿದರು ಎಂಬುದು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…