Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಮೈಸೂರು : ವಿಧಾನ ಪರಿಷತ್‌ ಸದಸ್ಯ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ.

ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ, ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್​ ಸಿಂಹ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್​ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್​, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.

Tags:
error: Content is protected !!