ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಸಂಸದರು ಫುಲ್‌ಸ್ಟಾಪ್ ಹಾಕಿದ್ದಾರೆ.
ಈ ಬಾರಿ ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ರಾಮೇಶ್ವರಂ ರೈಲಿಗೆ ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.
ಮೊದಲು ಮತ್ತು ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಈಗ ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…