ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಲ್ಲದೇ ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದ್ದಾರೆ.
ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ? ಅವರು ಹೊಗೋದಾದರೂ ಎಲ್ಲಿಗೆ ? ಎಂದು ಪ್ರಶ್ನಿಸಿದ್ದಾರೆ.
ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಾಗೇ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದುಬಸ್ತಿನಲ್ಲಿರುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಮುಸಲ್ಮಾನರು ತಪ್ಪು ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಜಿ.ಪರಮೇಶ್ವರ್ ಅವರಿಗೆ ಗೃಹ ಸಚಿವರಾಗಿರಲು ಯಾವುದೇ ನೈತಿಕತೆ ಇಲ್ಲ. ಇನ್ನು ನಮ್ಮ ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರಲು ಯಾರಿಗೆ ಧಮ್ ಇದೆ? ಯೋಗಿ ಆದಿತ್ಯನಾತ್ ಅವರ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಕು ಸಾಧ್ಯನಾ ಎಂದು ವಾಗ್ದಾಳಿ ನಡೆಸಿದ್ದಾರೆ.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…