ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು ಬಳಿಯ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಬಳಿಕ ಕುಂಭಮೇಳದಲ್ಲಿ ದೋಣಿ ವಿಹಾರದ ಮೂಲಕ ತ್ರಿವೇಣಿ ಸಂಗಮದಲ್ಲಿ ಸಂಚರಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಹೀಗಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಸ್ನೇಹಿತರೊಂದಿಗೆ ಭೇಟಿ ಕುಂಭಮೇಳದಲ್ಲಿ ಸ್ನಾನ ಮಾಡಿದ್ದಾರೆ.





