ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.
ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.
ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…