ಮೈಸೂರು

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದರು.

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದೊಡ್ಡ ಜಾತ್ರೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲ ಆಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕಸದ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ನಗರದ ಸ್ವಚ್ಛತೆಯನ್ನು ಕಾಪಾಡಬೇಕು. ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಬೇಕು. ಬರುವ ಭಕ್ತಾದಿಗಳ ಬಳಕೆಗೆ ಹೆಚ್ಚಿನ ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ತೇರು ಎಳೆಯುವಾಗ ಹೆಚ್ಚಿನ ಜನರು ತೇರಿನ ಬಳಿ ಬರುತ್ತಾರೆ. ಅವರು ತೇರಿನ ಬಳಿ ಬರದಂತೆ ಬ್ಯಾರಿಕೇಡಿಂಗ್ ವ್ಯವಸ್ಥೆ ಆಗಬೇಕು. ಬ್ಯಾರಿಕೇಡ್ ಸುತ್ತಾ ಹೆಚ್ಚಿನ ಪೊಲೀಸ್ ವ್ಯವಸ್ಥೆ ಮಾಡಬೇಕು. ನೂಕು ನುಗ್ಗಲು ಉಂಟಾಗಬಾರದು. ವ್ಯವಸ್ಥಿತವಾಗಿ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದರು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ರಥೋತ್ಸವ ದಿನದಂದು ರಥಗಳು ಚಲಿಸುವ ರಸ್ತೆಯಲ್ಲಿ ಅಡ್ಡಲಾಗಿರುವ ವಿದ್ಯುತ್ ತಂತಿಗಳನ್ನು ತೆಗೆದು, ರಥೋತ್ಸವ ಮುಗಿದ ನಂತರ ಪುನರ್ ಜೋಡಣೆ ಮಾಡಬೇಕು ಎಂದು ತಿಳಿಸಿದರು.

ರಥೋತ್ಸವದ ಅಂಗವಾಗಿ ನಡೆಯುವ ಉತ್ಸವಾದಿಗಳ ಮತ್ತು ತೆಪ್ಪೋತ್ಸವ ಕಾಲದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ರಥೋತ್ಸವದ ಪೂರ್ವಭಾವಿಯಾಗಿ 5 ರಥಗಳನ್ನು ತಾಂತ್ರಿಕವಾಗಿ ಪರಿಶೀಲಿಸಿ ದುರಸ್ಥಿ ಅಗತ್ಯವಿದ್ದಲ್ಲಿ ವರದಿ ನೀಡುವುದು ಹಾಗೂ ರಥ ಎಳೆಯಲು ಯೋಗ್ಯವಾಗಿರುವ ಬಗ್ಗೆ ದೃಢೀಕರಣ ನೀಡಬೇಕು ಎಂದರು.

ರಥೋತ್ಸವದ ಪ್ರಯುಕ್ತ ದೇವಾಲಯದ ಸುತ್ತ, ರಥಗಳು ಚಲಿಸುವ ರಸ್ತೆಗಳಲ್ಲಿ, ಹಳ್ಳ ದಿಣ್ಣೆಗಳಿದ್ದಲ್ಲಿ ಸಮತಟ್ಟು ಮಾಡಬೇಕು. ಗುಂಡಿಗಳು ಇದ್ದಲ್ಲಿ ದುರಸ್ಥಿ ಪಡಿಸಬೇಕು. ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಆಗಮಿಸುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾತ್ರೆಗೆ ಕ್ರಮ ವಹಿಸಬೇಕು. ತುರ್ತು ಚಿಕಿತ್ಸೆಗೆ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು, ಸುಸಜ್ಜಿತ ಆಂಬ್ಯುಲೆನ್ಸ್ ವಾಹನ ಮತ್ತು ಔಷಧಿ ಸಲಕರಣೆಗಳೊಂದಿಗೆ ನುರಿತ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದರು.

ರಥೋತ್ಸವ ಪ್ರಯುಕ್ತ ಭಕ್ತಾದಿಗಳಿಗೆ ಉಚಿತವಾಗಿ ಪ್ರಸಾದ ವಿತರಣೆಯ ಸಂಬಂಧ, ಸಂಘ ಸಂಸ್ಥೆಗಳಿಂದ ತಯಾರಿಸಿರುವ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ, ಭಕ್ತಾದಿಗಳಿಗೆ ವಿತರಿಸಲು ಯೋಗ್ಯವಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಮಾರ್ಚ್ 29 ರಿಂದ ಎಪ್ರಿಲ್ 02 ರವರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ರಥಗಳ ಜೊತೆಯಲ್ಲಿ ಸಾಗಲು ಅಗತ್ಯ ಸಿಬ್ಬಂದಿಗಳೊಂದಿಗೆ 2 ಅಗ್ನಿಶಾಮಕ ವಾಹನಗಳನ್ನು ರಥೋತ್ಸವದ ಹಿಂದಿನ ದಿನ ನಿಯೋಜಿಸಿ ಹಾಗೂ ರಥೋತ್ಸವ ಮುಗಿಯುವವರೆವಿಗೂ ಇರಲು ವ್ಯವಸ್ಥೆ ಮಾಡಬೇಕು. ಕಪಿಲಾ ನದಿ ತೀರದಲ್ಲಿ ಭಕ್ತಾದಿಗಳ ಸುರಕ್ಷತಾ ದೃಷ್ಠಿಯಿಂದ ಮುಳುಗು ತಜ್ಞರೊಂದಿಗೆ ಬೋಟುಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶ್ರೀರಾಂಪುರ, ಶಂಕರಪುರ, ಗೋಳೂರು, ದೇವರಸನಹಳ್ಳಿ, ಗೀಕಳ್ಳಿ, ನಂಜನಗೂಡು ಕಸಬಾ ಮತ್ತು ಮುಳ್ಳೂರು ಗ್ರಾಮಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago