ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ ಕೂಡಿದೆ. ಜಾತ್ರೆಯ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಅಭಿಷೇಕಗಳ ಜೊತೆಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಮುತ್ತಿನ ಅಲಂಕಾರ, ಸಹಸ್ರ ನಾಮಾರ್ಚನೆ, ನಿವೇದನೆ, ಮಹಾಮಂಗಳಾರತಿ, ರಾಜೋಪಾಚಾರ, ರಾಷ್ಟ್ರಾರ್ಶಿವಾದ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಬಳಿಕ ಪಾದ ಬೆಟ್ಟದ ಹಾಲುಗಡದ ಕಪಿಲಾ ನದಿಯ ದಂಡೆಯ ಮೇಲಿನ ಜಪ್ಪದಕಟ್ಟೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಬೆಟ್ಟ ತಲುಪಲು ಸರಗೂರು ಮಾರ್ಗವಾಗಿ ಪುರದಕಟ್ಟೆ ಮೂಲಕ ತಲುಪಬಹುದಾಗಿದ್ದು, ಮೈಸೂರಿನಿಂದ 52 ಕಿ.ಮೀ ಹಾಗೂ ಎಚ್ ಡಿ ಕೋಟೆ ಪಟ್ಟಣದಿಂದ 26 ಹಾಗೂ ಸರಗೂರಿನಿಂದ 14 ಕಿ ಮೀ ದೂರದಲ್ಲಿದೆ.
ಮೈಸೂರು, ಎಚ್.ಡಿ.ಕೋಟೆಯಿಂದ ಬರುವವರು ತುಂಬಸೋಗೆ, ಇಟ್ನಾ ಮಾರ್ಗವಾಗಿಯೂ ಬೆಟ್ಟ ತಲುಪಬುಹುದಾಗಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…