Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು| ಯೋಗ ದಿನಾಚರಣೆ ಪ್ರಯುಕ್ತ ಅರಮನೆ ಆವರಣದಲ್ಲಿ ಪೂರ್ವಭಾವಿ ತಾಲೀಮು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು.

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ ಪೂರ್ವಭಾವಿ ಯೋಗ ಅಭ್ಯಾಸದಲ್ಲಿ ನೂರಾರು ಯೋಗಪಟುಗಳು ವಿವಿಧ ಯೋಗಾಸನ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಯೋಗ ಆಯುಷ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರ್ವಭಾವಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಿನದಂದು ಇದೇ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವುದೇ ಈ ಕಾರ್ಯಕ್ರಮಗಳ ಮೂಲ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಯೋಗ ಸಂಸ್ಥೆಗಳ ನೆರವಿನಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕ ದೇವಿ ಹೇಳಿದರು.

ಅರಮನೆ ಮುಂಭಾಗ ವಿವಿಧ ಆಸನಗಳನ್ನು ಮಾಡುವ ಮುಖಾಂತರ ಪೂರ್ವಭಾವಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದು ಸಂತಸ ತಂದಿದೆ. ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಯೋಗ ಒಂದು ವರದಾನವಾಗಿದೆ. ಎಲ್ಲರೂ ಸಹ ಯೋಗಾಸನ ಮಾಡಿದರೆ ಉತ್ತಮ ಆರೋಗ್ಯ ಕಂಡುಕೊಳ್ಳಲು ಸಾಧ್ಯ ಎಂದು ಯೋಗ ಪಟು ಚಾಂದಿನಿ ಹೇಳಿದರು.

ಯೋಗವೊಂದು ಆರೋಗ್ಯವಾಗಿರಲು ಒಂದು ಸಾಧನವಾಗಿದೆ. ಎಲ್ಲರೂ ಯೋಗ ಮಾಡಿದರೆ ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಲು ಸಾಧ್ಯ. ನಾನು ಅಂದ ವಿದ್ಯಾರ್ಥಿ ಆಗಿದ್ದರು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿದ್ದೇನೆ ಎಂದು ಅಂದ ವಿದ್ಯಾರ್ಥಿ ಪೃಥ್ವಿರಾಜ್ ಸಂತಸ ವ್ಯಕ್ತಪಡಿಸಿದರು.

ಮಹಿಳೆಯರು ಹೆಚ್ಚು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡರೆ ಅವರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಅನುಕೂಲಕರವಾಗಲಿದೆ. ಋತುಮಾನದಲ್ಲಿ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಯೋಗ ಪಟು ಶಿಲ್ಪ ಎಂ.ಎಸ್ ತಿಳಿಸಿದರು.

Tags:
error: Content is protected !!