ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್. ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.
ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ, ಅಗಂಡಿ ಮುಂಗಟ್ಟು ಬಂದ್
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ರ್ಯಾಡಿಸನ್ ಬ್ಲೂ ಹೋಟೆಲ್, ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.





